ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ

ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ

ಬೆಂಗಳೂರು : ರಾಜಕಾರಣದಲ್ಲಿ ಸೋಲು ಗೆಲುವು ಮಾಲೂಲಿ ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಜೆಡಿಎಸ್ ಪಕ್ಷವನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.

ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ ಚರ್ಚೆಯೇ ಬಾಲಿಷ. ಜ.7ರಂದು ಎಚ್.ಡಿ.ಕುಮಾರಸ್ವಾಮಿ ಅರಮನೆ ಮೈದಾನದಲ್ಲಿ ನಡೆಯುವ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಗಟ್ಟಿ ದನಿಯಲ್ಲಿ ಹೇಳಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಏನು ಎಂಬುದು ಗೊತ್ತಿದೆ. ಸಭಾಪತಿ ವಿಚಾರದಲ್ಲಿ ಜಾತ್ಯಾತೀತ ನಾಯಕತ್ವ ಪ್ರಶ್ನೆ ಮಾಡುವ ನಾಟಕ ವಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ದೇವೇಗೌಡ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

Related