ಸಿಎಂ ಗೆ ಪ್ರಧಾನಿ ಮೋದಿ ಸೇರಿ ಗಣ್ಯರ ಶುಭಾಶಯ

ಸಿಎಂ ಗೆ ಪ್ರಧಾನಿ ಮೋದಿ ಸೇರಿ ಗಣ್ಯರ ಶುಭಾಶಯ

ಬೆಂಗಳೂರು,ಫೆ. 27 : 78ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗಣ್ಯಾತಿಗಣ್ಯರು ಹುಟ್ಟುಹಬ್ಬದ ಶುಭ ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಹ್ಲಾದ್ ಜೋಷಿ, ಡಿ.ವಿ.ಸದಾನಂದಗೌಡ, ನಿರ್ಮಲಾ ಸೀತಾರಾಮನ್, ಸುರೇಶ್ ಅಂಗಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

ಯಡಿಯೂರಪ್ಪನವರ ಹುಟ್ಟಹಬ್ಬಕ್ಕಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನೆಚ್ಚಿನ ಮುಖ್ಯಮಂತ್ರಿ ಯಡಿಯೂರಪ್ಪ ನೂರುಕಾಲ ಬಾಳಲಿ.

Related