ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ

  • In State
  • September 10, 2024
  • 73 Views
 ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ: ಜಿಲ್ಲಾಧಿಕಾರಿ

ಯಾದಗಿರಿ: ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಯರಗೋಳ ಗಡಿಯಿಂದ ಗೂಗಲ್ ನ ಗಡಿಯವರೆ ಬೃಹತ್ ಮಾನವ ಸರಪಳಿಯನ್ನು ಆಯೋಜನೆ ಮಾಡಿದ್ದು, ಭಾರತ ಸಂವಿಧಾನದ ಗೌರವ ಮತ್ತು ಘನತೆಯನ್ನು ಎತ್ತಿ ಹಿಡಿಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕೈ ಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಕೋರಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರದಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ಆಯೋಜನೆ ಕುರಿತು ಜಿಲ್ಲೆಯ ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೀದರ್ ರಾಜ್ಯದಿಂದ ಚಾಮರಾಜನಗರ ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ವಿಶೇಷವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಕುಟುಂಬದ ಸದಸ್ಯರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು.

 

Related