ಖುಷಿ ಸುದ್ದಿ ಏನಪ್ಪ ಅಂದ್ರೆ

ಖುಷಿ ಸುದ್ದಿ ಏನಪ್ಪ ಅಂದ್ರೆ

ಬೆಂಗಳೂರು, ಮಾ. 10 : ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರದ ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿ ಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ ಅನುದಾನ ಸೇರಿದಂತೆ, ಬ್ಯಾಗ್ ರಹಿತ ಶಾಲಾ ದಿನ ಘೋಷಿಸುವ ಮೂಲಕ, ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.
ರಾಜ್ಯ ಬಜೆಟ್ 2020-21ರಲ್ಲಿ ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕರಾ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿದ್ಧಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಘೋಷಿಸಿದ್ದಾರೆ.
ಅಲ್ಲದೇ ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು ಶಿಕ್ಷಕ ಮಿತ್ರ ಎಂಬ ಮೊಬೈಲ್ ಆಪ್ ಅಭಿವೃದ್ಧಿ, ಪ್ರತಿ ತಿಂಗಳಲ್ಲಿ ಎರಡನೇ ಶನಿವಾರಗಳಂದು ಬ್ಯಾಗ್ ರಹಿತ ದಿನ, ಸಂಭ್ರಮ ಆಚರಣೆ ಮಾಡಲಾಗುತ್ತದೆ ಎಂಬುದಾಗಿ ಘೋಷಿಸಿದ್ದಾರೆ. ರಾಜ್ಯದ ವಿದ್ಯಾರ್ಥಿಗಳಿಗೆ ಬ್ಯಾಗ್ ರಹಿತ ಶಾಲಾ ದಿನ ಆಚರಣೆಯ ಘೋಷಣೆ ಮಾಡಿದ್ದಾರೆ.

Related