ಕೈ ಸರ್ಕಾರ ಜನರನ್ನು ಕತ್ತಲಲ್ಲಿ ಇಡಲು ಮುಂದಾಗಿದೆ: ಬೊಮ್ಮಾಯಿ

ಕೈ ಸರ್ಕಾರ ಜನರನ್ನು ಕತ್ತಲಲ್ಲಿ ಇಡಲು ಮುಂದಾಗಿದೆ: ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತಿದ್ದಂತೆ ವಿದ್ಯುತ್ತರ ಹೆಚ್ಚಾಗಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಯಾದಿದ್ದಾರೆ.

ಹೌದು, ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು ಜನ ಸಾಮಾನ್ಯರಿಗೆ ಬರೆ ಎಳೆದಂತಾಗಿದೆ. ಗೃಹಜ್ಯೋತಿ ಯೋಜನೆ ಘೋಷಿಸಿ ಮತ್ತೊಂದೆಡೆ ದರ ಹೆಚ್ಚಿಸಿದ್ದಾರೆ ಎಂದು ಜನ ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇತ್ತ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ವಿದ್ಯುತ್ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ. ಈಗ ಜಾರಿಯಾಗಿದೆ ಎಂದು ​ಸಮಜಾಯಿಷಿ ನೀಡಿದ್ದರು. ಅಲ್ಲದೆ ಪ್ರಿಯಾಂಕ್ ಖರ್ಗೆ, ಡಾ ಜಿ ಪರಮೇಶ್ವರ್ ಸಹ ಇದೇ ಉಚ್ಛರಿಸಿದ್ದರು. ಕೆ.ಜೆ. ಜಾರ್ಜ್ ಹೇಳಿಕೆಗೀಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ನಮ್ಮ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿದ್ಯುತ್​ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ವಿದ್ಯುತ್​ ದರ ಹೆಚ್ಚಳವಾಗಿದೆ ಎನ್ನುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

ಗ್ಯಾರಂಟಿ ಯೋಜನೆ ವಿಚಾರದಲ್ಲಿ ಕಾದುನೋಡುವ ತಂತ್ರ ನಮ್ಮದು. ಉಚಿತ ಪ್ರಯಾಣ ವಿಚಾರದಲ್ಲಿ ಸರ್ಕಾರ ಆರಂಭ ಶೂರತ್ವ ತೋರುತ್ತಿದೆ. ಗ್ಯಾರಂಟಿ ಜಾರಿಗೆ ಹಣಕಾಸಿನ ಬಗ್ಗೆ ಸರ್ಕಾರ‌ ಸ್ಪಷ್ಟವಾಗಿ ಹೇಳುತ್ತಿಲ್ಲ. ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Related