ಕಲಬುರಗಿ: ಬಿಜೆಪಿ ಮುಖಂಡ ಪೊಲೀಸರ ವಶ?

ಕಲಬುರಗಿ: ಬಿಜೆಪಿ ಮುಖಂಡ ಪೊಲೀಸರ ವಶ?

ಕಲಬುರಗಿ: ಕಲಬುರಗಿಯಲ್ಲಿ ಬಿಜೆಪಿ ಮುಖಂಡನ ಹೈ ಡ್ರಾಮ ಮಾಡಿರುವುದರಿಂದ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಮಣಿಕಂಠ ರಾಠೋಡ್​​ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದು, ಅಲ್ಲಿಗೆ ತೆರಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದಲ್ಲಿ ಕಳೆದ ನವೆಂಬರ್ 18ರಂದು ನಡೆದ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಿ ರಾಜಕೀಯ ಲಾಭವನ್ನು ಪಡೆಯಲು ಮುಂದಾದ ಬಿಜೆಪಿ ಮುಖಂಡ ಈಗ ಪೊಲೀಸ್ ರ ವಷದಲ್ಲಿದ್ದಾನೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ತಮ್ಮ ವಿವಾದಾತ್ಮಕ ಹೇಳಿಕೆ ಮೂಲಕವೇ ಸುದ್ದಿಯಾದ ನಾಯಕ.

ಇನ್ನು ನ.18ರಂದು ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಣಿಕಂಠ ರಾಠೋಡ್ ಆರೋಗ್ಯ ವಿಚಾರಿಸಲು ಬಿಜೆಪಿ ಮುಖಂಡರಾದ ಆರ್.ಅಶೋಕ್ ಮತ್ತು ವಿಜಯೇಂದ್ರ ತೆರಳಿದ್ದರು. ಆರೋಗ್ಯ ವಿಚಾರಿಸಿದ ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಸಂಬಂಧ ಕಲಬುರಗಿ ಜಿಲ್ಲೆಯ ಶಹಬಾದ್ ಬಳಿ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ಮಾಡಿ ಎಸ್ಕೇಪ್ ಆಗಿರುವ ಬಗ್ಗೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು. ಹಲ್ಲೆ ಸಂಬಂಧ ಚಿತ್ತಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದ ಮಣಿಕಂಠ ರಾಠೋಡ್ ಆರೋಗ್ಯ ವಿಚಾರಿಸಲು ಪ್ರಮುಖ ಮುಖಂಡರೆಲ್ಲಾ ಆಗಮಿಸಿದ್ದರು.

Related