ಕಲಬುರಗಿಯ ಕಲ್ಯಾಣ ಕರ್ನಾಟಕ ಉತ್ಸವ ಸಿಎಂ ಧ್ವಜಾರೋಹಣ

ಕಲಬುರಗಿಯ ಕಲ್ಯಾಣ ಕರ್ನಾಟಕ ಉತ್ಸವ ಸಿಎಂ ಧ್ವಜಾರೋಹಣ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ನಮ್ಮಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸುತ್ತಾ ಇಂತಹ ವಿಶೇಷ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಅವಕಾಶ ದೊರಕಿದ್ದು ನನಗೆ ಸಂತಸ ಮತ್ತು ಧನ್ಯತೆಯ ಭಾವ ಮೂಡಿಸಿದೆ. ಹಾಗೂ ಈ ಭಾಗದ ಅಭಿವೃದ್ಧಿಯ ಸಂಕಲ್ಪವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗಿದೆ.

ಕನ್ನಡ ಭಾಷೆ ಸಾಹಿತ್ಯ, ಸಂಸ್ಕಂತಿ, ಕಲೆ, ಧರ್ಮ ಮೊದಲಾದ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಈ ಪ್ರದೇಶ ವಿಶ್ವವೇ ನಿಬ್ಬೆರಗಾಗುವಂತಹ ಜಗಜ್ಯೋತಿ ಬಸವಣ್ಣನವರು ಸಾಮಾಜಿಕ ಕ್ರಾಂತಿ  ಪ್ರಜಾಪ್ರಭುತ್ವದ  ಆಡಳಿತಕ್ಕೆ ಭದ್ರ ಬುನಾದಿ ಹಾಕಿದ ಪವಿತ್ರ ಭೂಮಿಯಾಗಿದೆ.

ಇನ್ನು ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಪ್ರಮುಖ 5 ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ 4 ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತು ಪಡಿಸಿದ್ದೇವೆ.

ಈ ಯೋಜನೆಗಳು ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗುವ ಅವಕಾಶವನ್ನು ನಾವು ಈ ಯೋಜನೆಗಳ ಮೂಲಕ ಕಲ್ಪಿಸಿದ್ದೇವೆ. ಶಕ್ತಿ, ಗೃಹ ಲಕ್ಷ್ಮಿ ಯೋಜನೆಗಳ ಅನುಕೂಲ ನೇರವಾಗಿ ಮಹಿಳೆಯರನ್ನೇ ತಲುಪುತ್ತಿದ್ದು, ಇದು ಅವರ ಶಿಕ್ಷಣ, ಆದಾಯ ಚಟುವಟಿಕೆಗಳಿಗೆ ಬೆಂಬಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

 

 

Related