ʼಕೈʼ ಪಡೆಗೆ ಟಕ್ಕರ್ ಕೊಡಲು ʼಕಮಲʼ ಪಡೆ ಸಜ್ಜು

ʼಕೈʼ ಪಡೆಗೆ ಟಕ್ಕರ್ ಕೊಡಲು ʼಕಮಲʼ ಪಡೆ ಸಜ್ಜು

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡಿ ತಾರತಮ್ಯ ಮಾಡುತ್ತಿದೆ ಎಂದು ಇಂದು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆ ಮಾಡಲು ಕರ್ನಾಟಕ ರಾಜ್ಯದ ಕಾಂಗ್ರೆಸ್ ನಾಯಕರುಗಳು ಮುಂದಾಗಿದ್ದಾರೆ. ಆದರೆ ಇದಕ್ಕೆ ಟಕ್ಕರ್ ಕೊಡಲು ಕರ್ನಾಟಕ ರಾಜ್ಯದ ಬಿಜೆಪಿ ಮುಖಂಡರು ಇಂದು ಬೆಂಗಳೂರಿನಲ್ಲಿರುವ ವಿಧಾನಸೌಧದ ಮುಂದುಗಡೆ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಕರ್ನಾಟಕದ ಜನತೆ ಕಾಂಗ್ರೆಸ್ ಗೆ ಮತ ನೀಡಿದು ಗ್ಯಾರಂಟಿಗಳನ್ನು ನಂಬಿ. ಆದರೆ ಈ ಗ್ಯಾರಂಟಿಗಳೆಲ್ಲ ಭೋಗಸ ಗ್ಯಾರಂಟಿಗಳಾಗಿವೆ. ಆದ್ದರಿಂದ ರಾಜ್ಯದ ಜನತೆಗೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ನಾಯಕರುಗಳು ಪ್ರತಿಭಟನೆಗೆ ಬಂದಾಗಿದ್ದಾರೆ.

ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ. ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್‌ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್‌ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು” ಎಂದು ರಾಜ್ಯ ಬಿಜೆಪಿ ಘಟಕ ಟೀಕೆ ಮಾಡಿದೆ.

Related