ಕನಕಪುರ ಬಂಡೆಗೆ 15 ಸಾವಿರ ಮತಗಳ ಮುನ್ನಡೆ

ಕನಕಪುರ ಬಂಡೆಗೆ 15 ಸಾವಿರ ಮತಗಳ ಮುನ್ನಡೆ

ಕನಕಪುರ: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಮಹಾಯುದ್ಧ ನಡೆಯುತ್ತಿದೆ.

ಇನ್ನು ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ಮಹಾ ಪೈಪೋಟಿ ನಡೆಯುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರಿಗೆ ಮುನ್ನಡೆ ಯಲ್ಲಿದ್ದಾರೆ.

ಹೌದು, ‘ಬಂಡೆ’ ಎಂದೇ ರಾಜಕಾರಣದಲ್ಲಿ ಫೇಮಸ್ ಆಗಿರುವ ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿದೆ. ಅಶೋಕ್ ಮುಂದಾಳತ್ವದಲ್ಲೇ ಕನಕಪುರ ಕೋಟೆ ಗೆಲ್ಲಲು ಬಿಜೆಪಿ ಸಿದ್ಧವಾಗಿದೆ. ಹೀಗಾಗಿ 2023ರ ಚುನಾವಣೆಯಲ್ಲಿ ದಿಲ್ಲಿಯಲ್ಲೇ ಕನಕಪುರ ರಾಜಕೀಯ ಲೆಕ್ಕಾಚಾರ ಹಾಕಲಾಗಿತ್ತು. ಆದರೆ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಡಿ.ಕೆ.ಶಿವಕುಮಾರ್ ಮುನ್ನಡೆ ಸಾಧಿಸಿದ್ದಾರೆ.

ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನಕಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಸತತ 7 ಗೆಲುವು ಸಾಧಿಸಿರುವ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ಶಪಥ ಮಾಡಿದಂತೆ ಈ ಚುನಾವಣೆ ಭಾಸವಾಗಿತ್ತು. ಆರ್.ಅಶೋಕ್ ಪದ್ಮನಾಭನಗರ ಕ್ಷೇತ್ರದ ಜತೆ ಕನಕಪುರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಿದ್ದರು. ಮೇ 10ರಂದು ರಾಮನಗರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿತ್ತು. ಈ ಪೈಕಿ ಕನಕಪುರ ಕ್ಷೇತ್ರದಲ್ಲಿ ಶೇ.84.52ರಷ್ಟು ವೋಟಿಂಗ್ ನಡೆದಿದ್ದು, ಅಭ್ಯರ್ಥಿಗಳ ಹಣೆಬರಹ ಇನ್ನೇನು ನಿರ್ಧಾರವಾಗಲಿದೆ.

 

Related