ಶಂಕರ್ ನಾಗ್ ಆಟೋ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಶಂಕರ್ ನಾಗ್ ಆಟೋ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶಂಕರ್ ನಾಗ್ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ನೆರವೇರಿಸಲೊಆಯಿತು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಧ್ವಜಾರೋಹಣ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇನ್ನು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸತೀಶ್ ರೆಡ್ಡಿ ಅವರು, ಕೇವಲ ಕನ್ನಡ ರಾಜ್ಯೋತ್ಸವವನ್ನು ನವಂಬರ್ ತಿಂಗಳಲ್ಲಿ ಮಾತ್ರ  ಆಚರಿಸದೆ ಪ್ರತಿದಿನ ಕನ್ನಡದ ಹಬ್ಬವನ್ನು ನಾವೆಲ್ಲರೂ ಒಟ್ಟಾಗಿ ಆಚರಿಸಬೇಕು. ಕನ್ನಡ ನಾಡನ್ನು ಬೆಳೆಸಬೇಕು ಕನ್ನಡ ನಾಡನ್ನು ಉಳಿಸಬೇಕೆಂದು ಹೇಳಿದರು.

ಈ ಸಂದರ್ಬದಲ್ಲಿ ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ, ಮುರಳಿ ಹಾಗೂ ಸ್ಥಳೀಯ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

Related