ಕನ್ನಡ ರಾಜ್ಯೋತ್ಸವ: ಪೂರ್ವಭಾವಿ ಸಭೆ

ಕನ್ನಡ ರಾಜ್ಯೋತ್ಸವ: ಪೂರ್ವಭಾವಿ ಸಭೆ

ಶಹಾಪುರ : ಪಟ್ಟಣದ ಭೀಮರಾಯನಗುಡಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಭೀಮಣ್ಣ ಶಖಾಪುರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಅವರು, ತಾಲ್ಲೂಕು ಆಡಳಿತವು ಇತ್ತೀಚೆಗೆ ಕನ್ನಡ ಪರ ಸಂಘಟನೆಗಳನ್ನು ದೂರ ಇರಿಸಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಕನ್ನಡ ಪರ ಸಂಘಟನೆಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಭಾರಿಯ ರಾಜ್ಯೋತ್ಸವದ ಕುರಿತು ಸಭೆ ಕರೆದಿಲ್ಲ, ಕೊವೀಡ್ ನಿಯಮಗಳ ಪ್ರಕಾರ ಸರಳ ರೀತಿಯಲ್ಲಿ ಆಚರಿಸಲು ನಿರ್ಣಯಿಸಲಾಯಿತು. ಕಡ್ಡಾಯವಾಗಿ ಎಲ್ಲ ಇಲಾಖೆಗಳ ಅನುಷ್ಠಾನಾಧಿಕಾರಿಗಳ ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ತಹಶೀಲ್ದಾರ್ ಸೂಚಿಸಬೇಕು ಎಂದರು.
ಸಭೆಯಲ್ಲಿ ಗ್ರಾಮ ಘಟಕ, ಯುವ ಘಟಕ, ಹೋಬಳಿ ಘಟಕ ಅಧ್ಯಕ್ಷ, ಉಪಾಧ್ಯಕ್ಷ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ರಸ್ತಾಪುರ ಹೋಬಳಿ ಅಧ್ಯಕ್ಷರಾಗಿ ಯಲ್ಲಪ್ಪ ಕನಕಗಿರಿ, ಸಗರ ಗ್ರಾಮದ ಹೋಬಳಿ ಅಧ್ಯಕ್ಷ ಮಹಾದೇವ ದೇಸಾಯಿ, ದೋರನಹಳ್ಳಿ ಹೋಬಳಿ ಅಧ್ಯಕ್ಷ ಸೈಫಾನ್ ಕೆಂಭಾವಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಸಿದ್ದು ಪಟ್ಟೇದಾರ, ಗುರುರಾಜ್ ಗುಂಡಗುರ್ತಿ, ಅಂಬ್ರೇಶ್ ತೆಲಗೂರ, ಭೀಮರಾಯ ಬಸವಂತಪೂರ, ಸಂಘಟನೆಯ ಪದಾಧಿಕಾರಿಗಳು ಇದ್ದರು.

Related