ಬೆಂಗಳೂರು: ಕರ್ನಾಟಕ ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಇಂದು (ಬುಧವಾರ ಮೇ 21) ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹಿ ಹಾಕುವ ಮೂಲಕ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಬ ಅವರು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಪವನ್ ಕಲ್ಯಾಣ್ ಅವರ ಕನ್ನಡ ಮಾತುಗಳನ್ನು ಕೇಳಿ ಕನ್ನಡಿಗರು ಜೈಕಾರ ಹಾಕುವ ಮೂಲಕ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರನ್ನು ಹೊಗಳಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಆನೆ ಸಂಪತ್ತು ಹೆಚ್ಚು ಹೊಂದಿರುವ ರಾಜ್ಯ ನಮ್ಮದು: ಸಿಎಂ
ಹೌದು, ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಲಾಯಿತು. ಈ ವೇಳೆ ಕನ್ನಡದಲ್ಲಿಯೇ ಆಂಧ್ರ ಡಿಸಿಎಂ ಮಾತು ಶುರು ಮಾಡಿದ್ದಾರೆ. ಜಯ ಹೇ ಕರ್ನಾಟಕ ಮಾತೆ ಎಂದೇ ಮಾತು ಆರಂಭಿಸಿದ ಪವನ್ ಕಲ್ಯಾಣ್ಗೆ ಅಭಿಮಾನಿಗಳ ಜೈಕಾರ ಕೂಗಿದ್ದಾರೆ.