ತೆಲುಗು ಚಿತ್ರರಂಗಕ್ಕೆ ಹಾರಿದ ಕಾಂತಾರ ಬೆಡಗಿ

ತೆಲುಗು ಚಿತ್ರರಂಗಕ್ಕೆ ಹಾರಿದ ಕಾಂತಾರ ಬೆಡಗಿ

ಬೆಂಗಳೂರು; ಕಾಂತಾರ ಚಿತ್ರದ ಮೂಲಕ ಇಡೀ ದೇಶದಾದ್ಯಂತ ಚಿರಪರಿಚಿತವಾದ ಸಪ್ತಮಿ ಗೌಡ ಅವರಿಗೆ ಹಲವಾರು ಚಿತ್ರಗಳಲ್ಲಿ ಬೇಡಿಕೆ ಬಂದಿದ್ದು ಈಗಾಗಲೇ ಹಿಂದಿ ಚಿತ್ರಗಳಲ್ಲಿ ನಟಿಸಿರುವ ಸಪ್ತಮಿ ಗೌಡ ಅವರು ಈಗ ತೆಲುಗು ಚಿತ್ರರಂಗದಲ್ಲೂ ಕೂಡ ನಟನೆ ಮಾಡಲಿದ್ದಾರೆ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಹೌದು, ಕನ್ನಡ ಭಾಷೆಯಲ್ಲಿ ನಿರ್ಮಾಣಗೊಂಡ ಕಾಂತಾರ ಚಿತ್ರ ಹಲವಾರು ಭಾಷೆಗಳಲ್ಲಿ ತೆರೆಕಂಡು ಈ ದೇಶದಾದ್ಯಂತ ಇತಿಹಾಸವನ್ನೇ ಸೃಷ್ಟಿಸಿತು. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರ ಜೊತೆ ನಟಿಸಿರುವ ಸಪ್ತಮಿ ಗೌಡ ಅವರು ಹಲವಾರು ಅವಕಾಶಗಳು ಹುಡುಕಿಕೊಂಡು ಬಂದಿವೆ. ಈಗ ತೆಲುಗು ಚಿತ್ರರಂಗದಲ್ಲಿ ದೊಡ್ಡ ಸ್ಟಾರ್ ಗಳ ಜೊತೆ ತೆರೆ ಹಂತದಲ್ಲಿದ್ದಾರೆ ಎಂಬ ಮಾಹಿತಿಯನ್ನು ಹೊರ ಹಾಕಿದ್ದಾರೆ.

‘ಕಾಂತಾರ’ ಸಿನಿಮಾ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಈ ಸಿನಿಮಾ ಸೂಪರ್ ಹಿಟ್ ಆಯಿತು. ನಂತರ ಅವರು ಹಿಂದಿ ಚಿತ್ರರಂಗಕ್ಕೂ ಕಾಲಿಟ್ಟರು. ಈಗ ತೆಲುಗಿನ ಸಿನಿಮಾದಲ್ಲಿ ಸಪ್ತಮಿ ಗೌಡ ಅವರು ನಟಿಸುತ್ತಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

ಸಪ್ತಮಿ ಗೌಡಗೆ ‘ಕಾಂತಾರ’ ಸಿನಿಮಾ ಮೂಲಕ ಸಿಕ್ಕ ಖ್ಯಾತಿ ತುಂಬಾನೇ ದೊಡ್ಡದು. ಈ ಚಿತ್ರ ಸೂಪರ್ ಹಿಟ್ ಆದ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಎಲ್ಲವನ್ನೂ ಅಳೆದು ತೂಗಿ ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಪರಿಚಯಗೊಂಡಿದ್ದ ಅವರು ಈಗ ತೆಲುಗಿಗೆ ಹೋಗುತ್ತಿದ್ದಾರೆ.

ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವ ಬಗ್ಗೆ ಸಪ್ತಮಿ ಗೌಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಿತಿನ್ ಸಿನಿಮಾದಲ್ಲಿ ನಾನು ನಟಿಸುತ್ತಿದ್ದೇನೆ. ಸಿನಿಮಾ ಶೂಟಿಂಗ್ ಕೂಡ ಶುರುವಾಗಿದೆ. ನಾನು ಹೋಗಿ ಸೆಟ್​ ಸೇರಿಕೊಳ್ಳಬೇಕಿದೆ’ ಎಂದಿದ್ದಾರೆ ಸಪ್ತಮಿ ಗೌಡ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

 

Related