ಬೆಂಗಳೂರಿನಲಿಂದು ಕರವೇ ಕಹಳೆ..!

ಬೆಂಗಳೂರಿನಲಿಂದು ಕರವೇ ಕಹಳೆ..!

ಬೆಂಗಳೂರು: ಕರ್ನಾಟಕದಲ್ಲಿ ಇರುಗ ಕನ್ನಡಿಗರಿಗೆ ಉದ್ಯೋಗ ಆಗ್ರಹಿಸಿ ಇಂದು (ಸೋಮವಾರ ಜುಲೈ 01) ರಂದು ರಾಜ್ಯದಾದಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4:00 ವರೆಗೆ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಗಿದ್ದು ಈ ಪ್ರತಿಭಟನೆಯಲ್ಲಿ ಘಟಾನುಘಟಿಗಳು ಎಂದರೆ ಕರವೇ ನಾಯಕರು ಮತ್ತು ಸಿನಿಮಾ ತಾರೆಯರು ಕೂಡ ಬಾಗಿಯಾಗಲಿದ್ದಾರೆ. ಇದನೂ ಓದಿ: ದೇಶದ ಜನತೆಗೆ ಸಿಹಿ ಸುದ್ದಿ..!

ಹೌದು, ಕನ್ನಡ ನಾಡಲ್ಲಿ ಹುಟ್ಟಿ, ಕನ್ನಡ ನಾಡಲ್ಲಿ ಬೆಳೆದರೂ ಕೂಡ ಕರ್ನಾಟಕದಲ್ಲಿರುವ ಜನರಿಗೆ ಉದ್ಯೋಗ ನೀಡದೆ ಹೊರ ರಾಜ್ಯ ಮತ್ತು ಹೊರದೇಶದವರು ನಮ್ಮ ಕರ್ನಾಟಕ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ಕರ್ನಾಟಕದ ಜನತೆಗೆ ಇಲ್ಲಿಯವರೆಗೂ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೂಡ ಯಾವುದೇ ರೀತಿ ಕೆಲಸ ಸಿಗದೇ ಇನ್ನೂ ಕೂಡ ನಿರುದ್ಯೋಗಿಗಳಾಗಿದ್ದಾರೆ. ಆದ್ದರಿಂದ ಕರ್ನಾಟಕದಲ್ಲಿರುವರೆಗೆ ಕನ್ನಡಿಗರಿಗೆ ಉದ್ಯೋಗವನ್ನು ನೀಡುವಂತೆ ಸೂಕ್ತ ಕಾನೂನನ್ನು ರಚಿಸಬೇಕೆಂದು ಎಂದು ಕರವೇ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಹಾಗೂ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ,

 

Related