ಕರುನಾಡ ಯಜಮಾನಿಗೆ ಇಂದಿನಿಂದ 2000 ರೂ

ಕರುನಾಡ ಯಜಮಾನಿಗೆ ಇಂದಿನಿಂದ 2000 ರೂ

ಮೈಸೂರು: ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಗು ಮುನ್ನ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿತ್ತು ಅದರಂತೆ ಈಗಾಗಲೇ ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿ  ಯೋಜನೆಗಳನ್ನು ಜಾರಿ ಮಾಡಲಾಗಿದ್ದು ಇಂದು ಸಂಸ್ಕೃತಿಕ ನಗರ ಮೈಸೂರಿನಲ್ಲಿ ಮನೆ ಯಜಮಾನಗೆ ಪ್ರತಿ ತಿಂಗಳು 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಹೌದು ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಬಹು ಮಹತ್ವಕಾಂಕ್ಷೆಯನ್ನು ಹೊಂದಿರುವ ಗ್ರಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ನೀಡಲಿದ್ದು ಕರುನಾಡಿನ ಪ್ರತಿ ಮನೆಯ ಒಡತಿಗೆ ಇಂದಿನಿಂದ ಪ್ರತಿ ತಿಂಗಳು 2000 ಸರ್ಕಾರ ನೀಡಲಿದೆ.

ಇನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು” 100 ದಿನ” ಪೂರೈಸಿ ಮುಂದೆ ದಾಪುಗಾಲು ಇಡುತ್ತಿದೆ. ಮತ್ತೊಂದೆಡೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಈ ಎರಡೂ ಸಂಭ್ರಮಗಳನ್ನು ಅದ್ದೂರಿಯಾಗಿ ಆಚರಿಸಲು ಮೈಸೂರಿನಲ್ಲಿ ವೇದಿಕೆ ಸಿದ್ಧವಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲೆ ಅತಿ ಹೆಚ್ಚು ನಿರೀಕ್ಷೆ ಇದ್ದ ಯೋಜನೆ ಗೃಹಲಕ್ಷ್ಮಿ. ಇಂದು ಈ ಗೃಹಲಕ್ಷ್ಮಿ ಯೋಜನೆಗೆ ಅರಮನೆ ನಗರಲ್ಲಿ ಚಾಲನೆ ಸಿಗಲಿದೆ. ಯೋಜನೆ ಚಾಲನೆಗೆ ಸಾಂಸ್ಕೃತಿಕ ನಗರಿ ಶೃಂಗಾರಗೊಂಡಿದೆ.

ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನ ಈಡೇರಿಸಲು ಸರ್ಕಾರ ಮುಂದಾಗಿದೆ. ಸದ್ಯ ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ, ಅದರಲ್ಲೂ ರಾಜ್ಯದ ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗುತ್ತಿದೆ. ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ‌ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸದ್ಯ ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷ ಜನರನ್ನು ಸೇರಿಸುವ ಉದ್ದೇಶ ಹೊಂದಿದ್ದು ಇದಕ್ಕಾಗಿ ಸಕಲ ಸಿದ್ದತೆಯನ್ನ ಸರ್ಕಾರ ಮಾಡಿಕೊಂಡಿದೆ. ‌ಈಗಾಲೆ ಬೃಹತ್‌ ವೇದಿಕೆ‌ ನಿರ್ಮಾಣವಾಗಿದ್ದು, ಇಂದು 12 ಗಂಟೆಗೆ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಜೊತೆ ಸಿಎಂ ಚಾಲನೆ ನೀಡಲಿದ್ದು, ಎಲ್ಲಾ ಸಿದ್ದತೆಗಳು ಪೂರ್ಣವಾಗಿವೆ.

 

Related