ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಯ ದೂರದೃಷ್ಟಿಗಾರ ಕೆಂಪೇಗೌಡ

ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಯ ದೂರದೃಷ್ಟಿಗಾರ ಕೆಂಪೇಗೌಡ

ಬೆಂಗಳೂರು : 511 ನೇ ಕೆಂಪೇಗೌಡ ಜಯಂತಿ ಪ್ರಯುಕ್ತ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಯ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೆರವೇರಿಸಿದರು.

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ  ನಿರ್ಮಿಸಲಾಗುತ್ತಿದೆ. ಈ ವೇಳೆ ಮಾತನಾಡಿದ ಯಡಿಯೂರಪ್ಪ ಅವರು, ಕೇಪೇಗೌಡರ ಜೀವನ ಸಾಧನೆಗೆ ಸರ್ಕಾರ ಗೌರವ ಅರ್ಪಿಸಿದೆ. ಕೇಂಪೇಗೌಡರು ದುರದೃಷ್ಟಿವುಳ್ಲ ಚತುರ ಆಡಳಿತಗಾರರು. ಬೆಂಗಳೂರನ್ನು ಯೋಜನಬದ್ಧವಾಗಿ ರೂಪಿಸುವಲ್ಲಿ ಅವರ ಪಾತ್ರ ಪ್ರಮುಖವಾದುದು ಎಂದು ನೆನಪಿಸಿಕೊಂಡರು.

ಶಾಶ್ವತ ನದಿ ಮೂಲಕ ಸಾವಿರಾರು ಕೆರೆಗಳನ್ನು ಕಟ್ಟುವ ಮೂಲಕ ಜನಜೀವನವನ್ನು ಸುಗಮಗೊಳಿಸಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಬೆಂಗಳೂರನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಿರ್ಮಾತೃ ಕೆಂಪೇಗೌಡರು. ಜನಪರ ಕಾಳಜಿ ಹೊಂದಿದ ಇವರು ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಅವರ ಬದುಕಿನ ಸಾಧನೆಯನ್ನು ತೆರೆದಿದ್ಟರು.

ಈ ವೇಳೆ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ, ಡಿಸಿಎಂ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ್, ಲಕ್ಷ್ಮಣ ಸವದಿ, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related