ಬಿಬಿಎಂಪಿ ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ

ಬಿಬಿಎಂಪಿ ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು: ನಗರದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಭ್ರಷ್ಟಾಚಾರದ ಕೆಲಸಗಳನ್ನು ಸಹಿಸುವುದಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.

ಬಿಬಿಎಂಪಿ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು ಸಲಹೆ ಸೂಚನೆಗಳನ್ನು ನೀಡಿದರು.

ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ನಾನು ಗ್ರಾಮೀಣ ಕ್ಷೇತ್ರದ ರಾಜಕಾರಣಿಯಾದರೂ ಓದಿದ್ದು ನಗರದಲ್ಲಿಯೇ. ಮುಖ್ಯಮಂತ್ರಿಯವರು ನಗರದ ಖಾತೆಗಳನ್ನು ನಿಭಾಯಿಸುವ ಟಾಸ್ಕ್ ನೀಡಿದ್ದಾರೆ. ಅದನ್ನು ನಿಭಾಯಿಸುವೆ ಎಂದರು.

ರಾಜ್ಯದಲ್ಲಿ ಶೇ 42ರಷ್ಟು ನಗರ ಜನಸಂಖ್ಯೆ ಏರಿದೆ. ನಗರದಲ್ಲಿ ಕೋಟಿಗೂ ಅಧಿಕ ಜನರಿದ್ದಾರೆ. ಹೊರಗಿನಿಂದ ಬರುವವರಿಗೂ ಸೌಕರ್ಯ ಕಲ್ಪಿಸಬೇಕಿದೆ. ಬೆಂಗಳೂರಿನ ಮುಖಾಂತರ ಭಾರತವನ್ನು ನೋಡುವ ಕಾಲ ಬಂದಿದೆ. ಬಿಡಿಎನಲ್ಲೂ ಯೋಜನೆಗಳ ಬಗ್ಗೆ ಮಾತುಕತೆ ನಡೆಸುತ್ತೇನೆ. ಸಾಧ್ಯವಾದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಇದಕ್ಕೆ ತಯಾರಾಗಿ ಇರುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ. ಭ್ರಷ್ಟಾಚಾರ ರಹಿತ ಪಾಲಿಕೆಯಾಗಬೇಕು ಎಂದು ಸೂಚನೆ ನೀಡಿದ್ದೇನೆ. ಸಾಮಾನ್ಯರನ್ನು ಗೌರವದಿಂದ ಕಾಣುವಂತೆ ಸೂಚಿಸಿದ್ದೇನೆ ಎಂದರು.

 

Related