ನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ: ಡಿಸಿಎಂ

ನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ: ಡಿಸಿಎಂ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಾಗಕೋಟಿಯ ಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚುರುಕಿನ ತನಿಖೆಯನ್ನು ಮಾಡುತ್ತಿದ್ದು ನಿಗಮದಲ್ಲಿ ಖದೀಮರು ಸೇರಿಕೊಂಡಿದ್ದಾರೆಂದು ಹೇಳಿದ್ದಾರೆ. ಇದನ್ನೂ ಓದಿ: ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ: ಡಿಸಿಎಂ

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರು ಸೇರಿಕೊಂಡಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಅದೇ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ಎಂಡಿ ಮಾಡಿದ್ದಾರೆ. ಅಂತಹ ಪ್ರಕರಣಗಳನ್ನು ಪರಿಶೀಲನೆ ಮಾಡಲಾಗುವುದು. ಹೀಗಾಗಿ ಆರ್ಥಿಕ ಇಲಾಖೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮುಂದಾಗಿದೆ ಎಂದರು.

 

Related