ಅನೂಪ್ ಭಂಡಾರಿ ಜೊತೆ ಮತ್ತೆ ಕಿಚ್ಚ ಸುದೀಪ್ ನಟನೆ!

ಅನೂಪ್ ಭಂಡಾರಿ ಜೊತೆ ಮತ್ತೆ ಕಿಚ್ಚ ಸುದೀಪ್ ನಟನೆ!

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸದ್ಯ ಮ್ಯಾಕ್ಸ್ ಚಿತ್ರದ ಚಿತ್ರೀಕರಣದಲ್ಲಿ ಫುಲ್ ಬ್ಯುಸಿಯಾಗಿದ್ದು ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಈಗಾಗಲೇ ಕೊನೆಯ ಹಂತದಲ್ಲಿದ್ದು ಫೆಬ್ರುವರಿ ತಿಂಗಳಲ್ಲಿ ಮತ್ತೆ ಕಿಚ್ಚ ಸುದೀಪ್ ಅವರು ಅನೂಪ್ ಭಂಡಾರಿ ಮತ್ತೆ ತೆರೆ ಜೊತೆ ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಬೆಳ್ಳಂಬೆಳಿಗ್ಗೆ ಬಹುನಿರೀಕ್ಷಿತ ಮ್ಯಾಕ್ಸ್ ಬಗ್ಗೆ ಸುದೀಪ್ ಮಾಹಿತಿ ನೀಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇನೆ. ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

Related