ಸಿಎಂ ಮುಂದೆ ಬುಸುಗುಟ್ಟಿದ ಕಿಂಗ್ ಕೋಬ್ರಾ

ಸಿಎಂ ಮುಂದೆ ಬುಸುಗುಟ್ಟಿದ ಕಿಂಗ್ ಕೋಬ್ರಾ

ಬೆಂಗಳೂರು: 2023ನೆಯ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತೆ ಬಿಜೆಪಿ ಸರ್ಕಾರವನ್ನು ರಚಿಸಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಇಂದು ಬೆಳಗ್ಗೆ ಎಂಟು ಗಂಟೆಯಿಂದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು. ಈಗಾಗಲೇ ಹಿನ್ನಡೆ, ಮುನ್ನಡೆ ಲೆಕ್ಕಾಚಾರಗಳು ಪ್ರಾರಂಭವಾಗಿದೆ. ಬೆಳಿಗ್ಗೆ 9:45 ರವರೆಗಿನ ಅಂಕಿಅಂಶಗಳ ಪ್ರಕಾರ, 224 ಸ್ಥಾನಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ 115 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 75 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರು ರಾಜ್ಯದಲ್ಲಿ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಹಾವು ಪತ್ತೆ

ರಾಜ್ಯದ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸುವ ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೆಲ ಹೊತ್ತಿನ ಹಿಂದೆ ಶಿಗ್ಗಾಂವಿ ಬಿಜೆಪಿ ಶಿಬಿರ ಕಚೇರಿಗೆ ಆಗಮಿಸಿದ್ದರು. ಆದರೆ ಅಷ್ಟರಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ವಾಸ್ತವವಾಗಿ ಸಿಎಂ ಬೊಮ್ಮಾಯಿ ಬಿಜೆಪಿ ಕಚೇರಿಯಲ್ಲಿದ್ದಾಗ ನಾಗರ ಹಾವು ಅಲ್ಲಿ ಹರಿದಾಡುತ್ತಿತ್ತು.

ಈ ಬಗ್ಗೆ ಒಂದು ವೀಡಿಯೋ ಕೂಡ ವೈರಲ್ ಆಗಿದೆ. ಕಚೇರಿ ಆವರಣದಲ್ಲಿ ಸಿಎಂ ಬೊಮ್ಮಾಯಿ ಇದ್ದಾಗ ಏಕಾಏಕಿ ಕಿಂಗ್ ಕೋಬ್ರಾ ಅವರ ಎದುರಿಗೆ ಬಂದಿರುವುದನ್ನು ಇದರಲ್ಲಿ ಕಾಣಬಹುದು. ಹಾವನ್ನು ನೋಡಿ ಸಿಎಂ ಅಲರ್ಟ್ ಆಗಿರುವುದನ್ನು ಈ ವೀಡಿಯೊದಲ್ಲಿ ನೋಡಬಹುದು. ಭದ್ರತಾ ಸಿಬ್ಬಂದಿ ಕೂಡ ಅವರನ್ನು ಹಿಂದೆ ಉಳಿಯುವಂತೆ ಹೇಳಿದರು. ನಂತರ ಆ ಹಾವನ್ನು ರಕ್ಷಣೆ ಮಾಡಿದ್ದಾರೆ.

 

Related