ಕಿಂಗ್ ಕೊಹ್ಲಿಯ ವಿಶ್ವ ದಾಖಲೆ

  • In Cricket
  • November 16, 2023
  • 21 Views
ಕಿಂಗ್ ಕೊಹ್ಲಿಯ ವಿಶ್ವ ದಾಖಲೆ

ಐಐಸಿ ವರ್ಲ್ಡ್ ಕಪ್ 2023 ಸೆಮಿ ಫೈನಲ್ ನಲ್ಲಿ ಭಾರತದ ಆಟಗಾರ ವಿರಾಟ್ ಕೊಹ್ಲಿ ಅವರು ವಿಶ್ವ ದಾಖಲೆ ಮಾಡಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಪೀಸ್ ಪೀಸ್ ಮಾಡಿರುವ ಕಿಂಗ್ ಕೊಹ್ಲಿ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.

ಹೌದು, ಬುಧವಾರ ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 117 ರನ್‌ಗಳ ಪ್ರಬಲ ಇನ್ನಿಂಗ್ಸ್ ಆಡಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಅವರ 50ನೇ ಶತಕವಾಗಿದ್ದು, ಇದರೊಂದಿಗೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಈ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಉಪಸ್ಥಿತರಿದ್ದ ಸಚಿನ್ ತೆಂಡೂಲ್ಕರ್ ಕೂಡ ಕೊಹ್ಲಿ, ಶತಕ ಪೂರೈಸಿದ ಬಳಿಕ ಎದ್ದು ನಿಂತು ಗೌರವ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ 50ನೇ ಏಕದಿನ ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಭಾರತದ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್ ಕೂಡ ಪ್ರತಿಕ್ರಿಯಿಸಿದ್ದಾರೆ.

Related