ಕಿಚ್ಚನ ಅಬ್ಬರದ ಪ್ರಚಾರ

ಕಿಚ್ಚನ ಅಬ್ಬರದ ಪ್ರಚಾರ

ಚಿತ್ರದುರ್ಗ: ರಾಜ್ಯದಲ್ಲಿ ಮತದಾರರ ಗಮನ ಸೆಳೆಯಲು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೌದು, ಇಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಮೊಳಕಾಲ್ಮೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್ ಅವರು, ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಮತಯಾಚನೆ ಮಾಡಿದರು.

ಈ ವೇಳೆ ಸುದೀಪ್ ನೋಡಲು ಸಾವಿರಾರು ಜನರು ರಸ್ತೆಗಳಲ್ಲಿ ಕಿಕ್ಕಿರಿದು ನೆರೆದಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆಯೂ ನಟ ಸುದೀಪ್‌ ಅವರು ಮನವಿ ಮಾಡಿಕೊಂಡರು.

 

Related