ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ರೋಚಕ ಬೆಳವಣಿಗೆ ಒಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಎರಡನೇ ವಿಕೆಟ್ ಪತನಕ್ಕೆ ಸೂಚನೆ ಹೊರಬಿದ್ದಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಇದೀಗ ಎರಡನೇ ವಿಕೆಟ್ ಪತನವಾದಂತೆ ಕಾಣುತ್ತಿದೆ. ಸಹಕಾರ ಸಚಿವ ಕೆ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರು ತಂತ್ರಜ್ಞಾನದ ತವರೂರು: ಡಿಕೆಶಿ
ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವರಾದ ರಾಜಣ್ಣ ಅವರು, ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡವರು. ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. 1972ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಅವರು, ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿಯೂ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
