ಕೆಪಿಸಿಸಿ ಎಂದರೆ ʼಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ʼ ಆಗಿ ಬದಲಾಗಿದೆ: ಸಿಟಿ ರವಿ

ಕೆಪಿಸಿಸಿ ಎಂದರೆ ʼಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ʼ ಆಗಿ ಬದಲಾಗಿದೆ: ಸಿಟಿ ರವಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರನ್ನು ಅಭಿವೃದ್ಧಿ ಮಾಡಲು ‘ಬ್ರಾಂಡ್ ಬೆಂಗಳೂರುʼ  ಬಗ್ಗೆ ಸಾರ್ವಜನಿಕರಿಂದ ಅವರ ಅಭಿಪ್ರಾಯಗಳನ್ನು ಗಳಿಸಿ ಬೆಂಗಳೂರಿಗೆ ವಿವಿಧ ರೀತಿಯ ಕಾಮಗಾರಿಗಳನ್ನು ಮಾಡಬೇಕು ಎಂದು ಈಗಾಗಲೇ ಸಾರ್ವಜನಿಕರ ಅಭಿಪ್ರಾಯಗಳನ್ನು ಕಲೆ ಹಾಕುತ್ತಿರುವ ಡಿಕೆ ಶಿವಕುಮಾರ್ ಅವರು ಬೆಂಗಳೂರನ್ನು ಅಭಿವೃದ್ಧಿ ಮಾಡೇ ಮಾಡುತ್ತೇನೆ ಎಂದು ಪಣತೊಟ್ಟಿದ್ದಾರೆ.

ಇನ್ನುಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವರಾಗಿರುವಂತಹ ಸಿಟಿ ರವಿ ಅವರು, ಬ್ರ್ಯಾಂಡ್ ಬೆಂಗಳೂರು ಎಂದರೆ ಭ್ರಷ್ಟ ಬೆಂಗಳೂರು ಎಂದು ಮಾಜಿ ಶಾಸಕ ಸಿಟಿ ರವಿ ಹೇಳಿದ್ದಾರೆ.

ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕಿದವರೊಬ್ಬರು ಪಂಚ ರಾಜ್ಯಗಳ ಚುನಾವಣೆ ವೆಚ್ಚಕ್ಕೆ 2 ಸಾವಿರ ಕೋಟಿ ರು. ನೀಡುವುದಾಗಿ ಹೇಳಿದ ಮಾಹಿತಿ ಇದೆ. ಮುಖ್ಯಮಂತ್ರಿಗಳು ಕಷ್ಟಪಟ್ಟು ಅದರ ಅರ್ಧ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರಂತೆ. ಸತ್ಯವನ್ನು ಅವರೇ ಹೇಳಬೇಕು. ಇದನ್ನು ನೋಡಿದರೆ ಬ್ರ್ಯಾಂಡ್ ಬೆಂಗಳೂರು ಎಂದರೆ ಭ್ರಷ್ಟ ಬೆಂಗಳೂರು ಎಂದು ಅರ್ಥವಾಗುತ್ತದೆ. ಸಿಬಿಐ ತನಿಖೆ ನಡೆದರೆ ನಂ.1 ಮತ್ತು ನಂ.2 ಸಂಗ್ರಹಿಸಿದ ಮೊತ್ತದ ವಿವರ ಹೊರಬರುತ್ತದೆ ಎಂದು ಹೇಳಿದರು.

ಇನ್ನೂ ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ. ಕರ್ನಾಟಕವನ್ನು ಇವರು ಎಟಿಎಂ ಮಾಡಿಕೊಂಡಿದ್ದಾರೆ. ಹಿಂದೆ ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದ ಗುತ್ತಿಗೆದಾರ ಅಂಬಿಕಾಪತಿ ಈಗ ಕರೋಡ್‍ಪತಿಯಾಗಿದ್ದಾರೆ. ಅವರ ಮನೆಯಲ್ಲಿ 42 ಕೋಟಿ, ಇನ್ನೊಬ್ಬ ಬಿಲ್ಡರ್ ಕೇತಮಾರನಹಳ್ಳಿ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ 40 ಕೋಟಿ ಸೇರಿದಂತೆ ಕೋಟಿ ಕೋಟಿ ಹಣ ಹೊರಗೆ ಬರುತ್ತಿದೆ. ಇವರಿಬ್ಬರೂ ರಾಜ್ಯದ ನಂ.1, ನಂ.2 ಅವರ ಬೇನಾಮಿಗಳು ಎಂಬ ಮಾಹಿತಿ ನಮಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Related