ಚಾಮುಂಡಿ ಬೆಟ್ಟಕ್ಕೆ ಕೆ.ಎಸ್.ಈಶ್ವರಪ್ಪ ಭೇಟಿ

  • In State
  • July 22, 2022
  • 317 Views
ಚಾಮುಂಡಿ ಬೆಟ್ಟಕ್ಕೆ ಕೆ.ಎಸ್.ಈಶ್ವರಪ್ಪ ಭೇಟಿ

ಮೈಸೂರು, ಜು.22- ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ನಾಡ ಅಧಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಪ್ರಸಾದ ವಿತರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರು ಸೇರಿ ಕಾಂಗ್ರೆಸ್‍ಗೆ ಜಾತಿ ಪಟ್ಟ ಅಂಟಿಸಿದ್ದಾರೆ ಎಂದು ಆರೋಪಿಸಿದರು.

ಡಿ.ಕೆ.ಶಿವಕುಮಾರ್ ಒಬ್ಬ ಒಳ್ಳೆಯ ನಾಯಕ ಎಂದುಕೊಂಡಿದ್ದು, ಸಿಎಂ ಆಗಲು ತನ್ನ ಸಮುದಾಯ ತನ್ನ ಬೆನ್ನಿಗೆ ನಿಲ್ಲಬೇಕು ಎಂದು ಹೇಳುವ ಮೂಲಕ ಜಾತಿವಾದಿ ಆಗಿದ್ದಾರೆ. ಸಿದ್ದರಾಮಯ್ಯ ಕುರುಬರ ನಾಯಕ ಎಂದು ಹೇಳುವ ಮೂಲಕ ಅವರು ಸಹ ಜಾತಿವಾದಿಯಾಗಿದ್ದಾರೆ. ಇವರಿಬ್ಬರು ಸೇರಿ ಕಾಂಗ್ರೆಸ್‍ಗೆ ಜಾತಿಯ ಕೆಸರು ಅಂಟಿಸಿದ್ದಾರೆ ಎಂದು ಪುನರುಚ್ಚರಿಸಿದರು.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಹರಿಪ್ರಸಾದ್ ಈ ವಿಚಾರದಲ್ಲಿನ ಹೇಳಿಕೆಗಳು ಕಾಂಗ್ರೆಸ್‍ಗೆ ಗೌರವ ತರುವ ರೀತಿಯಲ್ಲಿವೆ ಎಂದರು. ನಾನು ಮತ್ತೆ ಸಚಿವ ಸಂಪುಟಕ್ಕೆ ಸೇರುವುದು ವರಿಷ್ಠರಿಗೆ ಬಿಟ್ಟ ವಿಚಾರ. ಯಾವುದೇ ತಪ್ಪು ಇರದಿದ್ದರೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ. ಈಗ ಆರೋಪ ಮುಕ್ತನಾಗಿದ್ದೇನೆ ಎಂದು ತಿಳಿಸಿದರು.

Related