ದಶಮಾನೋತ್ಸವ ಸಂಭ್ರಮದಲ್ಲಿ ಕ್ಷೀರಭಾಗ್ಯ

ದಶಮಾನೋತ್ಸವ ಸಂಭ್ರಮದಲ್ಲಿ ಕ್ಷೀರಭಾಗ್ಯ

ತುಮಕೂರು: ಕಾಂಗ್ರೆಸ್ ಸರ್ಕಾರ 2003ರಲ್ಲಿ ಅಧಿಕಾರದಲ್ಲಿದ್ದಾಗ ಒಂದರಿಂದ ಹತ್ತನೆಯ ತರಗತಿ ಮಕ್ಕಳಿಗೆ ಹಾಲು ನೀಡುವ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿ ಮಾಡಿತ್ತು.

ಕ್ಷೀರ ಭಾಗ್ಯ ಯೋಜನೆಯು ಜಾರಿ ಮಾಡಿ ಈಗ 10 ವರ್ಷ ಕಳೆದಿದೆ ಆದ್ದರಿಂದ ತುಮಕೂರಿನ ಮಧುಗಿರಿ ಎಲ್ಲಿ ಕ್ಷೀರ ಭಾಗ್ಯ ಯೋಜನೆ ಶತದಿನೋತ್ಸವ ದಿನಾಚರಣೆಯನ್ನು ಮಾಡಲಾಯಿತು.

ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಕ್ಷೀರಭಾಗ್ಯ ಯೋಜನೆಗೆ ದಶಮಾನೋತ್ಸವದ ಸಂಭ್ರಮ. ಈ ಯೋಜನೆ ಜಾರಿಗೆ ಬಂದು 10 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಕ್ಷೀರಕ್ರಾಂತಿಯ ದಶಮಾನೋತ್ಸವ ಸಂಭ್ರಮಾಚರಣೆಗೆ ಕಲ್ಪತರುನಾಡಿನ ಏಕಶಿಲಾ ನಗರಿ ಮಧುಗಿರಿ ಇಂದು ಸಾಕ್ಷಿಯಾಯಿತು. 2013 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೊದಲನೇ ಬಾರಿಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ 2013ರ ಆ. 1 ರಂದು 1ರಿಂದ 10ನೇ ತರಗತಿಯ ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಮಹತ್ವದ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದರು.

ಇದೀಗ ಈ ಯೋಜನೆ 10 ವರ್ಷ ಯಶಸ್ವಿಯಾಗಿ ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳ ಸಹಯೋಗದೊಂದಿಗೆ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವವನ್ನು ಆಚರಿಸಲಾಯಿತು.

ಮಧುಗಿರಿಯ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಭವ್ಯವಾಗಿ ಸಿದ್ದಗೊಳಿಸಲಾಗಿದ್ದ ಬೃಹತ್ ವೇದಿಕೆಯಲ್ಲಿ ನಡೆದ ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿ ಸೇರಿದಂತೆ ಸಚಿವರುಗಳು, ಶಾಸಕರುಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರುಗಳು ಉಪಸ್ಥಿತರಿದ್ದರು.

Related