ನೆಲಮಂಗಲ ಬಳಿ ಜೆಡಿಎಸ್ ಬೃಹತ್ ಸಮಾವೇಶ

ನೆಲಮಂಗಲ ಬಳಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಕಳೆದ ತಿಂಗಳು ೧೬ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದು, ಮೇ ೧೩ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ ‘ಜನತಾ ಜಲಧಾರೆ’ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ನೆಲಮಂಗಲ ಸಮೀಪದ ಬಾವಿಕೆರೆ ಬಳಿಯ ಬೆಂಗಳೂರು-ಹಾಸನ ಹೆದ್ದಾರಿಯ ಪಕ್ಕದ ಬೃಹತ್ ಮೈದಾನದಲ್ಲಿ ಮೇ ೧೩ರಂದು ಮಧ್ಯಾಹ್ನ ೩ ಗಂಟೆಗೆ ಸಮಾವೇಶ ಆರಂಭವಾಗಲಿದೆ. ಧರ್ಮದ ದಂಗಲ್ ಹೆಸರಿನಲ್ಲಿ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೆಲವರು ಅಶಾಂತಿ ಸೃಷ್ಟಿಸುತ್ತಿದ್ದಾರೆ. ನಮ್ಮ ರಾಜ್ಯ ಉತ್ತರ ಪ್ರದೇಶ, ಗುಜರಾತ್ ಆಗಲು ಬಿಡಲ್ಲ. ನಮ್ಮ ನೆಲದ ಪರಂಪರೆಗೆ ಧಕ್ಕೆ ಆಗದಂತೆ ಸಮಾವೇಶವನ್ನು ಆಯೋಜಿಸಿದ್ದೇವೆ ಎಂದು ಹೇಳಿದರು.
ಜಲಧಾರೆ ಕಾರ್ಯಕ್ರಮದಲ್ಲಿ ಸಂಜೆ ೬.೩೦ ಗಂಟೆಗೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ೨೦ ಜನ ಪಂಡಿತರ ತಂಡ ವಾರಣಾಸಿಯಿಂದ ಬರುತ್ತಿದ್ದಾರೆ. ಸಮಾವೇಶದಲ್ಲಿ ಈ ಅಂಶ ಬಹಳ ಮಹತ್ವದ್ದು. ೧೮೦ ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಸ ಮಾಡಲಾಗಿದೆ. ಅಷ್ಟೂ ಕಡೆ ಜಲಧಾರೆ ಕಾರ್ಯಕ್ರಮ ನಡೆದಿದೆ. ೧೫ ಗಂಗಾ ರಥಗಳು ಯಶಸ್ವಿಯಾಗಿ ಸಂಚರಿಸಿವೆ. ಇವುಗಳ ಮೂಲಕ ರಾಜ್ಯದ ಎಲ್ಲಾ ಜೀವ ನದಿಗಳಿಂದ ಸಂಗ್ರಹ ಮಾಡಲಾಗಿರುವ ಪುಣ್ಯಜಲವನ್ನು ಒಂದು ಬೃಹತ್ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಪೂಜೆ ನೆರವೇರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ರಾಜ್ಯ ಸರ್ಕಾರ ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ನೀರಾವರಿ ಯೋಜನೆಗಳಿಗೆ ಸಂಬAಧಿಸಿದAತೆ ಜನರಿಗೆ ಭರವಸೆ ಕೊಟ್ಟರೂ ನಿಗದಿತ ಅವಧಿಯಲ್ಲಿ ಕಾರ್ಯಕ್ರಮ ಮುಗಿಸಿಲ್ಲ.
ನಮ್ಮ ರಾಜ್ಯದಲ್ಲಿ ಸರ್ಕಾರಕ್ಕೆ ಯಾವುದೂ ಅಸಾಧ್ಯ ಇಲ್ಲ. ಸರಿಯಾದ ರೀತಿಯಲ್ಲಿ ನದಿ ನೀರು ಉಪಯೋಗಿಸುವ ಸಂಕಲ್ಪ ಬರಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಸ್ವತಂತ್ರ ಸರ್ಕಾರ ಬಂದರೆ ಐದು ವರ್ಷದಲ್ಲಿ ಎಲ್ಲ ನದಿ ನೀರು ಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

Related