ಕುಪೇಂದ್ರ ರೆಡ್ಡಿ ರಾಜ್ಯಸಭೆ ಕಣಕ್ಕೆ

ಕುಪೇಂದ್ರ ರೆಡ್ಡಿ ರಾಜ್ಯಸಭೆ ಕಣಕ್ಕೆ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯ ಕಣಕ್ಕೆ ಕುಪೇಂದ್ರ ರೆಡ್ಡಿ ಅವರು ಅಖಾಡಕ್ಕೆ ಇಳಿದಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಈ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಇನ್ನು ಕುಪೇಂದ್ರ ರೆಡ್ಡಿ ಅವರು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿರುವುದರ ಹಿಂದಿನ ಗುಟ್ಟೇನು ಎಂದು ಇನ್ನುವರೆಗೂ ತಿಳಿದು ಬಂದಿಲ್ಲ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರು ಈ ಬಾರಿ ರಾಜ್ಯಸಭಾ ಕಣಕ್ಕಿಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸಲಹೆ ಕೊಟ್ಟಿದ್ದಾರೆ. ಮತಗಳ ಕೊರತೆ ಬಗ್ಗೆ ಚುನಾವಣೆ ವೇಳೆ ನಿರ್ಧಾರ ಆಗುತ್ತೆ. ಬಿಜೆಪಿ ಹಾಗೂ ಜೆಡಿಎಸ್​ಗೆ ಹೆಚ್ಚುವರಿ ಮತಗಳಿವೆ ಅಂತ ಹೇಳಿದರು. ಇನ್ನೂ ಮಂಗಳೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ಜೈ ಶ್ರೀರಾಮ್ ಘೋಷಣೆ ಕೂಗುವುದು ಪ್ರಜಾಪ್ರಭುತ್ವ ವಿರೋಧಿಯೇ? ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ, ಭಗವಾನ್ ರಾಮನ ಮಾತನ್ನು ಕೇಳಿ ಅವರು ತೊಂದರೆಗೀಡಾಗುತ್ತಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಸಂಪೂರ್ಣವಾಗಿ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಅವರು ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಬಹಳ ಆತುರದಿಂದ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ

Related