ಮರಾಠಿ ಭಾಷೆಯಲ್ಲಿ ಭಾಷಣ ಮಾಡಿದ್ರ ಲಕ್ಷ್ಮಿ ಹೆಬ್ಬಾಳ್ಕರ್?

ಮರಾಠಿ ಭಾಷೆಯಲ್ಲಿ ಭಾಷಣ ಮಾಡಿದ್ರ ಲಕ್ಷ್ಮಿ ಹೆಬ್ಬಾಳ್ಕರ್?

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದಿಂದ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಸಚಿವೆ ಹೆಬ್ಬಾಳ್ಕರ್ ಅವರು ಮರಾಠಿಯಲ್ಲಿ ಮಾತನಾಡುತ್ತ, ಈ ಬಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೊಡಿಸುವುದಾಗಿ ಹೇಳುತ್ತಿದ್ದರು.

ಕರ್ನಾಟಕ ರಾಜ್ಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಮಾತನಾಡಲು ಹಿಂದಿಟು ಹಾಕುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮರಾಠಿಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೌದು, ಬೆಳಗಾವಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತಾಡುವಾಗ ಅವರನ್ನು ಮರಾಠಿಯಲ್ಲಿ ಸಂಬೋಧಿಸುತ್ತಾರೆ. ಮರಾಠಿ ಮಾತಾಡುವ ಜನರ ವೋಟು ಕಳೆದುಕೊಳ್ಳುವ ಭೀತಿ ಸಚಿವೆಯನ್ನು ಮರಾಠಿಯಲ್ಲಿ ಮಾತಾಡಲು ಪ್ರೇರೇಪಿಸಿದ್ದರೆ ಆಶ್ಚರ್ಯವಿಲ್ಲ.

ಕುವೆಂಪು ನಗರದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಅವರು ಮರಾಠಿಯಲ್ಲಿ ಮಾತಾಡುತ್ತಾ ತಮ್ಮ ಮಗನ ಪರ ಪ್ರಚಾರ ಮಾಡುತ್ತಿದ್ದಾರೆ.

 

Related