ವರುಣನ ಆರ್ಭಟಕ್ಕೆ ಭೂಕುಸಿತ..!

  • In Crime
  • August 5, 2022
  • 25 Views
ವರುಣನ ಆರ್ಭಟಕ್ಕೆ ಭೂಕುಸಿತ..!

ಮಡಿಕೇರಿ ತಾಲ್ಲೂಕಿನ ಭಾಗಮಂಡಲ, ಕರಿಕೆ ರಸ್ತೆಯಲ್ಲಿ ಹಾಗೂ ಸಂಪಾಜೆ ಸಮೀಪದ ಕಲ್ಲಾಳ ಭೂಕುಸಿತವಾಗಿದೆ. ಭಾರೀ ಮಳೆಗೆ ಚೆಟ್ಟಿಮಾನಿ, ಮರ್ಪಡ್ಕ ಗ್ರಾಮಗಳ ಸೇತುವೆಗಳು ಕೊಚ್ಚಿ ಹೋಗಿವೆ. ಮಡಿಕೇರಿ ತಾಲೂಕಿನ ಸಂಪಾಜೆ, ಚೆಂಬು, ಕರಿಕೆ, ಕೊಯನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಅಲ್ಲಲ್ಲಿ ಮೂಲ ಸೌಕರ್ಯಕ್ಕೆ ಹಾನಿಯಾಗಿದೆ.

ಕೊಡಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯ ಅಬ್ಬರ ಮತ್ತೆ ಜೋರಾಗಿದೆ. ಆಗಸ್ಟ್ 1ರಿಂದಲೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹಲವೆಡೆ ಅಪಘಾತಗಳು ಸಂಭವಿಸಿವೆ. ಚೆಂಬು, ಗೂನಡ್ಕ ದಬ್ಬಡ್ಕ ಈ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಲ್ಲಿಯ ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಸದ್ಯ ಸೇತುವೆಯ ಮಣ್ಣು ಕೊಚ್ಚಿ ಹೋಗಿರುವ ಭಾಗಕ್ಕೆ ಜನರು ಮರದ ಪಾಲನ್ನು ಅಳವಡಿಸಿ ಅದರ ಮೇಲೆ ನಡೆದಾಡುತ್ತಿದ್ದಾರೆ. ಸೇತುವೆಗೆ ಸಣ್ಣ ಪೈಪುಗಳ ಅಳವ ಡಿಸಿರುವುದರಿಂದಲೇ ಸೇತುವೆ ಈ ಸ್ಥಿತಿಗೆ ತಲುಪಲು ಕಾರಣ ಎಂದು ಸ್ಥಳೀಯರಾದ ಭರತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related