ಸೌಲಭ್ಯ ವಂಚಿತ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ

ಸೌಲಭ್ಯ ವಂಚಿತ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ

ಕೆ.ಆರ್.ಪುರ, ಫೆ. 26: ಹಿಂದೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದರು ಇದನ್ನು ಮನಗಂಡು ಇಂದಿನ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಕೆ.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆಯ 2019-20 ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಿಕ್ಕಂದಿನಲ್ಲಿ ಓದುವ ವೇಳೆ ಅಗತ್ಯ ಸೌಲಭ್ಯಗಳು ಸಿಗಲು ಪರದಾಡುವಂತಾಗಿತ್ತು. ಅಗತ್ಯಕ್ಕೆ ತಕ್ಕಂತೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಈಗಿನ ಸರ್ಕಾರಗಳು ಬಡ ವಿದ್ಯಾರ್ಥಿಗಳು ಹಿತದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಸವಲತ್ತುಗಳನ್ನು ಒದಗಿಸುತ್ತಿವೆ ಎಂದರು.

ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗದಂತೆ ಗೋಡೆಗೆ ಸುಣ್ಣ ಬಣ್ಣ, ಹೆಚ್ಚುವರಿ ಕೋಣೆಗಳು, ಶೌಚಾಲಯ, ಗ್ರಂಥಾಲಯ, ಕ್ರೀಡಾಂಗಣ ಇನ್ನಿತರ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಒಟ್ಟು 684 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ ಎಂದು ತಿಳಿಸಿದರು.

ಕಾಲೇಜು ಪ್ರಾಂಶುಪಾಲ ಟಿ.ಸಿ.ಚಂದ್ರಶೇಖರ್ ಮಾತನಾಡಿ ಕಾಲೇಜಿನಲ್ಲಿ ಎರಡು ಸಾವಿರದ ಐದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಲಾಗುತ್ತಿದೆ. ಕಾಲೇಜು ಸಭಾಂಗಣ ಅಭಿವೃದ್ಧಿಪಡಿಸುವಲ್ಲಿ ಹಿನ್ನಡೆಯಾಗಿದೆ ಅತಿ ಶೀಘ್ರದಲ್ಲಿ ಅಭಿವೃದ್ಧಿಪಡಿಸಿ ಅನುಕೂಲ ಮಾಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಇದೇ ಸಮಯದಲ್ಲಿ ಬಸವನಪುರ ವಾರ್ಡ್ ನಲ್ಲಿ  ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆ, ಅರ್ಹ ಪಲಾನುಬಾವಿಗಳಿಗೆ 30 ಸೈಕಲ್‌ಗಳು ವಿತರಣೆ, ಅಂಗವಿಕಲರಿಗೆ 05 ತ್ರಿಚಕ್ರ ವಾಹನಗಳು, ಅರ್ಹ ವಿಧ್ಯಾರ್ಥಿಗಳಿಗೆ 09 ಲ್ಯಾಪ್‌ಟಾಪ್ ಗಳು, ಆಯುಷ್ ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ 2500 ಹೆಲ್ತ್ ಕಾರ್ಡ್ ಗಳು  ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಜಯಪ್ರಕಾಶ್, ಶ್ರೀಕಾಂತ್, ಪ್ರಾಂಶುಪಾಲ ಟಿ.ಸಿ.ಚಂದ್ರಶೇಖರ್, ಯುವ ರೆಡ್ ಕ್ರಾಸ್ ಘಟಕದ ನೂಡಲ್ ಅಧಿಕಾರಿ ಡಾ.ಕೆ.ನಾರಾಯಣ, ಮುಖಂಡರಾದ ಶಿವ ಪ್ರಸಾದ್, ಉದಯ್ ಕುಮಾರ್, ಶ್ರೀರಾಮುಲು,  ಮುನೇಗೌಡ, ಕೆ.ಪಿ.ಕೃಷ್ಣ ಸೇರಿದಂತೆ ಹಲವಾರು ಹಾಜರಿದ್ದರು.

 

Related