ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ಮಟ್ಟದಲ್ಲಿ ಸಂಚು: ಮೋದಿ

ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ಮಟ್ಟದಲ್ಲಿ ಸಂಚು: ಮೋದಿ

ಚಿಕ್ಕಬಳ್ಳಾಪುರ: ದೇಶದಲ್ಲಿ ಮತ್ತೊಮ್ಮೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ನರೇಂದ್ರ ಮೋದಿಯವರು ಈಗಾಗಲೇ ಎಲ್ಲಾ ರೀತಿಯ ಪ್ರಯತ್ನಗಳ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿದ್ದು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪ್ರಧಾನಿ ಹುದ್ದೆಯಿಂದ ನನ್ನನ್ನು ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರುಗಳಿಂದ ಹೊನ್ನಾರ ನಡೆಯುತ್ತಿದೆ ಆದರೆ ದೇಶದ ತಾಯಿಂದಿರ ಆಶೀರ್ವಾದ ನನ್ನ ಮೇಲೆ ಇದೆ. ಹಾಗಾಗಿ ನಾನು ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತೇನೆ ಎಂದು ಹೇಳಿದ್ದಾರೆ

ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಎನ್‌ಡಿಎ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

 

Related