ದೊಡ್ಡ ಪ್ರಮಾಣದಲ್ಲಿ ಲಸಿಕೆ ತಯಾರಿಕೆ: ಮೋದಿ

ದೊಡ್ಡ ಪ್ರಮಾಣದಲ್ಲಿ ಲಸಿಕೆ ತಯಾರಿಕೆ: ಮೋದಿ

ನವ ದೆಹಲಿ : ನಮ್ಮ ದೇಶದಲ್ಲಿ ಒಂದಲ್ಲ ಎರಡಲ್ಲ ಮೂರು ಕೊರೊನಾ ಲಸಿಕೆಗಳು ತಯಾರಾಗುತ್ತಿವೆ. ಲಸಿಕೆ ಉತ್ಪಾದನೆಗೆ ಹಸಿರು ನಿಶಾನೆ ಸಿಕ್ಕಿದ ಬಳಿಕ ಅತ್ಯಧಿಕ ಪ್ರಮಾಣದಲ್ಲಿ ಮಾರ್ಗಸೂಚಿ ಸಹ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

74ನೇ ಸ್ವಾತಂತ್ರ‍್ಯ ದಿನಾಚರಣೆಯ ಹಿನ್ನೆಲೆಯಲ್ಲಿ 7ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ ಮೋದಿ, ಪ್ರತಿಯೊಬ್ಬರು ಕೊರೋನಾಗೆ ಲಸಿಕೆ ಯಾವಾಗ ಬರುತ್ತದೆ ಎಂದು ಕೇಳುತ್ತಿದ್ದಾರೆ. ವಿಜ್ಞಾನಿಗಳಿಂದ ಈ ಲಸಿಕೆಗೆ ಹಸಿರು ನಿಶಾನೆ ಸಿಕ್ಕಿದ ಕೂಡಲೇ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಯಾಗಲಿದೆ ಎಂದು ತಿಳಿಸಿದರು.

ಆರಂಭದಲ್ಲೇ ಕೊರೋನ ವರಿಯರ್ಸ್ ಗಳಿಗೆ  ಗೌರವ ಸಲ್ಲಿಸಿ ಭಾಷಣ ಆರಂಭಸಿದ ಮೋದಿ ಕೊರೋನಾ ಬಂದ ಸಮಯದಲ್ಲಿ 3 ಸಾವಿರ ಮಂದಿಗೆ ಪ್ರತಿ ದಿನ ಪರೀಕ್ಷೆ ನಡೆಯುತ್ತಿತ್ತು. ಆದರೆ ಈಗ ಪ್ರತಿ ದಿನ 7 ಲಕ್ಷ ಮಂದಿಗೆ ಪರೀಕ್ಷೆ ಮಾಡುತ್ತಿದ್ದೇವೆ. ಆರಂಭದಲ್ಲಿ ಎನ್ 95 ಮಾಸ್ಕ್, ಪಿಪಿಇ ಕಿಟ್, ವೆಂಟಿಲೇರ‍್ಗಳು ಉತ್ಪಾದನೆ ಆಗುತ್ತಿರಲಿಲ್ಲ.

ಈ ಭಾಷಣದಲ್ಲೇ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಪ್ರತೀ ಭಾರತೀಯರಿಗೆ ಡಿಜಿಟಲ್ ಆರೋಗ್ಯ ಕರ‍್ಡ್ ನೀಡಲು ರ‍್ಕಾರ ಮುಂದಾಗಿದೆ. ರೋಗಿಗಳ ಸಂಪರ‍್ಣ ಚಿಕಿತ್ಸೆಯ ವಿವರ ವೈದ್ಯರಿಗೆ ಇದರಿಂದ ಸಿಗಲಿದೆ ಎಂದು ತಿಳಿಸಿದರು.

Related