ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ?: ಸಿಎಂ

ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ?: ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೆ.03) ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕರೆದಿದ್ದು ಈ ಸಭೆಗೆ ರಾಜ್ಯಮನೆತನದ ವಿರೋಧ ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ? ನಾನು ಕಾನೂನು ಪ್ರಕಾರವೇ ಇವತ್ತಿನ ಸಭೆ ಮಾಡುತ್ತಿದ್ದೇನೆ. ಕೋರ್ಟ್​​​ನಲ್ಲಿ ತಡೆಯಾಜ್ಞೆ ತೆರವು ಆಗಿದ್ದಕ್ಕೆ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜ ಮನೆತನದ ವಿರೋಧ!

ಇನ್ನು ಸರ್ಕಾರಕ್ಕೆ ಕೊರೊನಾ​​ ಹಗರಣದ ಮಧ್ಯಂತರ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟದ ಮುಂದೆ ವರದಿ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ. ನನ್ನ ಗಮನಕ್ಕೆ ಬರದೆ ಸುಧಾಕರ್​​ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ‌ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಕೆ.ಸುಧಾಕರ್​​ಗೆ ಸುಳ್ಳು ವರದಿ ಎಂದು ಹೇಗೆ ಗೊತ್ತಾಗುತ್ತದೆ?. ಸುಧಾಕರ್ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದರು.

 

Related