ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 11ರ ಮಾಜಿ ಸ್ಪರ್ಧೆ ಲಾಯರ್ ಜಗದೀಶ್ ಅವರಿಗೆ ಪೊಲೀಸರು ಬಂಧನ ಮಾಡಿದ್ದಾರೆ.
ಶುಕ್ರವಾರ ರಾತ್ರಿ (ಜನವರಿ 24) ರಂದು ಜಗದೀಶ್ ಅವರ ಮನೆ ಮೇಲೆ ಸುಮಾರು 100 ರಿಂದ 150 ಜನ ಗುಂಪು ಕಟ್ಟಿಕೊಂಡು ಬಂದು ಜಗದೀಶ್ ಅವರ ಮೇಲೆ ಏಕಾಏಕಿ ಹಲ್ಲೆ ಮಾಡಲು ಯತ್ನಿಸುತ್ತಾರೆ.
ಈ ಹಲ್ಲೆಯಲ್ಲಿ ಜಗದೀಶ್ ಅವರಿಗೆ ಮೂಗು ಮತ್ತು ತುಟಿಯಿಂದ ರಪ್ತಶ್ರಾವವಾಗಿದ್ದು ಇದನ್ನು ನೋಡಲಾಗದೆ ಜಗದೀಶ್ ಅವರ ಗನ್ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ ಎಂಬವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಲಾಗಿದ್ದು, ಈ ದೂರಿನ ಆಧಾರದ ಮೇಲೆ ಇದೀಗ ಕೊಡಿಗೇಹಳ್ಳಿ ಪೊಲೀಸರು ಜಗದೀಶ್ ಹಾಗೂ ಅವರ ಗನ್ ಮ್ಯಾನ್ ಅವರನ್ನು ಕರೆಸ್ಟ್ ಮಾಡಿದ್ದಾರೆ
ಇನ್ನು ಇತ್ತೀಚೆಗೆ ಅಣ್ಣಮ್ಮ ದೇವಿ ಕೂರಿಸುವ ವಿಚಾರಕ್ಕೆ ಕಿರಿಕ್ ಆಗಿತ್ತು. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಇದೆ. ಇದೇ ರಸ್ತೆಯಲ್ಲಿ ಅಣ್ಣಮ್ಮ ದೇವಿಯನ್ನು ಕೋರಿಸಿದ್ದನ್ನು ಜಗದೀಶ್ ಪ್ರಶ್ನೆ ಮಾಡಿದ್ದರು. ಆಗ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಘಟನೆ ಸಂಬಂಧ ಪ್ರತಿಕ್ರಿಯಿಸುವಾಗ ಅವರು ಆವಾಜ್ ಹಾಕಿದ್ದರು. ದರ್ಶನ್ ಅಭಿಮಾನಿಗಳನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದರು. ‘ಈ ಕೆಲಸ ಮಾಡಿದ್ದು ದರ್ಶನ್ ಅಭಿಮಾನಿಗಳಂತೆ. ನನ್ನ ಬಳಿ ಬರುವಾಗ ವಿಮೆ ಮಾಡಿಸಿಕೊಂಡು ಬನ್ನಿ’ ಎಂದಿದ್ದರು.
ಈ ಕಾರಣಕ್ಕಾಗಿ ಇದೀಗ ಜಗದೀಶ್ ರವರ ಮನೆ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದೇನೇ ಆಗಲಿ ಮೈ ಕೈ ಮುಟ್ಟಿ ಹೊಡೆದಾಡುವ ಬದಲು ಒಬ್ಬರಿಗೊಬ್ಬರು ಕೂತುಕೊಂಡು ಮಾತಾಡೋದ್ರಿಂದ ಎಲ್ಲಾ ಸಮಸ್ಯೆ ಬಗೆ ಹರಿಯುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ಸ್ ಗಳ ಮೇಲೆ ಕಾಮೆಂಟ್ಸ್ ಹಾಕುತ್ತಿದ್ದಾರೆ.
