ಸಿದ್ದರಾಮಯ್ಯನ ವಿರುದ್ಧ ಶಾಸಕ ಟಾಂಗ್

ಸಿದ್ದರಾಮಯ್ಯನ ವಿರುದ್ಧ ಶಾಸಕ ಟಾಂಗ್

ಮೈಸೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಲ್ಲಾಡುತ್ತಿದೆ, ಸರ್ಕಾರ ಬೀಳುತ್ತದೆ ಎಂದು ಹೇಳುವವರು ರಾಜಕೀಯ ಪ್ರಭುದ್ಧತೆ ಇಲ್ಲದವರು ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಟಾಂಗ್ ನೀಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಸಚಿವರ ಜೊತೆ ಹೊಂದಾಣಿಕೆ ಇತ್ತು. ಕುಮಾರಸ್ವಾಮಿ ಅವರಿಗೆ ಆಗಿರುವ ಕಹಿ ಅನುಭವ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿ ಕುಮಾರಸ್ವಾಮಿ ಅವರ ಹೆಸರು ಕೆಟ್ಟಿತ್ತು ಎಂದು ನನಗೆ ಅನ್ನಿಸುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆಯ ಕೆಲಸವನ್ನೇ ಮಾಡಿದ್ದಾರೆ. ಎಂದರು.

Related