ಕರಾರಸಾ ನಿಗಮಕ್ಕೆ ಮಹಾರಾಷ್ಟ್ರದ ನಾಯಕರ ಭೇಟಿ

ಕರಾರಸಾ ನಿಗಮಕ್ಕೆ ಮಹಾರಾಷ್ಟ್ರದ ನಾಯಕರ ಭೇಟಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾರಿಗೆ ಇಲಾಖೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿವೆ.

ಹೌದು, ಸಾರಿಗೆ ಹಾಗೂ ಮುಜುರಾಯಿ ಸಚಿವರಾಗಿರುವಂತಹ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಸೇರಿದಂತೆ ಇನ್ನು ಹಲವಾರು ಬಸ್ಸುಗಳನ್ನು ಬಿಡುಗಡೆ ಮಾಡಿದ್ದಾರೆ.

ಇಂದು ಸೋಮವಾರ ಫೆಬ್ರವರಿ 03 ರಂದು ಕರಾರಸಾ ನಿಗಮದ, ಘಟಕ,‌ ಕಾರ್ಯಾಗಾರ ಹಾಗೂ ಕೇಂದ್ರ ಕಛೇರಿಗೆ ಮಹಾರಾಷ್ಟ್ರ ಸರ್ಕಾರದ ಶ್ರೀ ಪ್ರತಾಪ್‌ ಸರ್‌ನಾಯಕ್‌, ಸಾರಿಗೆ ಸಚಿವರು, ಶ್ರೀ ಮಾಧವ್ ಕುಸೆಕರ್ ಭಾಆಸೇ, ಎಂ.ಎಸ್.ಆರ್.ಟಿ.ಸಿ ಉಪಾಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡವು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, ಕೆ.ಎಸ್.ಆರ್.ಟಿ.ಸಿ. ಆರೋಗ್ಯ, ರೂ 1 ಕೋಟಿ ಅಪಘಾತ ವಿಮೆ, ಇತರೆ ಉಪಕ್ರಮಗಳ ಬಗ್ಗೆ ರಾಮಲಿಂಗಾ ರೆಡ್ಡಿ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು,‌ಕರ್ನಾಟಕ ಸರ್ಕಾರ ಮತ್ತು ಶ್ರೀ ರಿಜ್ವಾನ್ ನವಾಬ್ ಮಾನ್ಯ ಉಪಾಧ್ಯಕ್ಷರು, ಕರಾರಸಾ. ನಿಗಮ, ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರೊಂದಿಗೆ ವಿವರವಾಗಿ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ:  ಪತ್ರಕರ್ತರಿಗೆ ಸಿಹಿ ಸುದ್ದಿ ನೀಡಿದ ಡಿಸಿಎಂ

ಮುಂದುವರೆದು, ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ಐರಾವತ ಕ್ಲಬ್ ಕಾಸ್, ಐರಾವತ ಕ್ಲಬ್ ಕಾಸ್ 2.0, ಅಂಬಾರಿ ಡ್ರೀಮ್ ಕ್ಲಾಸ್, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್, ನಗರ ಸಾರಿಗೆ, ರಾಜಹಂಸ ಹಾಗೂ ಅಶ್ವಮೇಧ ವಾಹನಗಳನ್ನು ವೀಕ್ಷಿಸಿದರು. ಘಟಕ ಹಾಗೂ ಕಾರ್ಯಾಗಾರ ನಿರ್ವಹಣೆ, ವಾಹನಗಳಿಗೆ ನೀಡಿರುವ ಬ್ರಾಂಡಿಗ್ ಹಾಗೂ ವಾಹನಗಳ ಪುನಶ್ಚೇತನ ಕಾರ್ಯ ಹಾಗೂ ಹಲವು ಉಪಕ್ರಮಗಳ ಕುರಿತು ಮುಕ್ತಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಬೆಂ.ಮ.ಸಾ. ಸಂಸ್ಥೆ, ಹಾಗೂ ಮಾನ್ಯ ನಿರ್ದೇಶಕರು (ಸಿ ಮತ್ತು ಜಾ), ಅಪರ ಸಾರಿಗೆ ಆಯುಕ್ತರು, (ಪ್ರವರ್ತನ) (ದಕ್ಷಿಣ), ಹಾಗೂ ಎಂ.ಎಸ್.ಆರ್.ಟಿ.ಸಿ. ತಾಂತ್ರಿಕ, ಸಂಚಾರ ಹಾಗೂ ಕಾಮಗಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಕರಾರಸಾ ನಿಗಮದ ಅಧಿಕಾರಿಗಳು ಉಪಸ್ಥಿತಿರಿದ್ದರು.

Related