ಕೈಗಾರಿಕೆಗಳ ಸ್ಥಾಪನೆಗಾಗಿ 50 ಸಾವಿರ ಎಕರೆ ಭೂ ಸ್ವಾಧೀನ

  • In State
  • May 7, 2022
  • 199 Views

ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ತತ್‌ಕ್ಷಣವೇ ಭೂ ಮಂಜೂರು ಮಾಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಭಾರತೀಯ ಉತ್ಪಾದನಾ ಪ್ರದರ್ಶನದ ಕರ್ಟನ್ ರೈಸರ್ ಉದ್ಘಾಟಿಸಿ ಮಾತನಾಡಿದ ಅವರು, ಇದೇ ವರ್ಷದ ನವೆಂಬರ್ ೨ರಿಂದ ೪ರವರೆಗೆ ಬೆಂಗಳೂರಿನಲ್ಲಿ ೨೦೨೨ರ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದರು. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಉದ್ಯಮಿಗಳಿಗೆ ತತಕ್ಷಣವೇ ಭೂಮಿ, ನೀರು, ರಸ್ತೆ, ಸೇರಿದಂತೆ ವಿಶ್ವ ದರ್ಜೆಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ವ್ಯಕ್ತಪಡಿಸಿದರು.

ರಾಜ್ಯದ ೨ ಮತ್ತು ೩ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜಿಸುವುದರ ಜೊತೆಗೆ ಶೀಘ್ರದಲ್ಲೇ ರಾಜ್ಯ ಸರ್ಕಾರವು ಒಂದು ಜಿಲ್ಲೆ ಒಂದು ಉತ್ಪನ್ನ ನೀತಿಯನ್ನು ಜಾರಿಗೆ ತರಲಿದೆ ಎಂದು ಮುರುಗೇಶ್ ನಿರಾಣಿ ಹೇಳಿದರು.
ರಾಜ್ಯದಾದ್ಯಂತ ಸಮತೋಲಿತ ಕೈಗಾರಿಕೀಕರಣವನ್ನು ಉತ್ತೇಜಿಸಿಸಲು ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್ ಯೋಜನೆ ಜಾರಿಗೆ ತಂದಿದ್ದು, ಈ ಮೂಲಕ ಹಲವು ಕೈಗಾರಿಕಾ ಸಮೂಹಗಳನ್ನು ಗುರುತಿಸಲಾಗಿದೆ.

Related