ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭ

ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭ

ಬೆಂಗಳೂರು: ಇಂದಿನಿಂದ ಕರ್ನಾಟಕ ರಾಜ್ಯದಲ್ಲಿ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು ಇದೇ ಫೆಬ್ರವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಇನ್ನು ಅದಿವೇಶನ ಪ್ರಾರಂಭಕ್ಕು ಮುನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿ, ಕರ್ನಾಟಕ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಹೊಗಳಿದರು.

ಅಧಿವೇಶನದಲ್ಲಿ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ, ಬರ ಪರಿಹಾರ ಬಿಡುಗಡೆ ವಿಳಂಬ, ಕಾಮಗಾರಿಯಲ್ಲಿ ಶೇಕಡಾ 40ರಷ್ಟು ಕಮಿಷನ್ ಆರೋಪ, ರಾಜ್ಯದ ಹಣಕಾಸು ಸ್ಥಿತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸದನದಲ್ಲಿ ವಾಕ್ಸಮರ ನಡೆಯುವ ಸಾಧ್ಯತೆ ಇದೆ. ಹಾಗೆಯೇ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿರುವ ಧ್ವಜಸ್ತಂಭದಲ್ಲಿ ಅನುಮತಿ ಪಡೆಯದೆ ಹಾರಿಸಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವು ಗೊಳಿಸಿದ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸಿದೆ.

 

Related