ಹೋರಾಟ ಹತ್ತಿಕ್ಕುವ ದಮನಕಾರಿ ನೀತಿ ಬಿಜೆಪಿ ಕೈಬಿಡಲಿ

ಹೋರಾಟ ಹತ್ತಿಕ್ಕುವ ದಮನಕಾರಿ ನೀತಿ ಬಿಜೆಪಿ ಕೈಬಿಡಲಿ

ಗಂಗಾವತಿ :  ದೇಶದ ರೈತರಿಗೆ ಮಾರಕವಾಗಿರುವ 3 ಕೃಷಿ ಕಾಯಿದೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಂದಿರುವ ತಿದ್ದುಪಡಿ ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜಭವನ್ ಚಲೋ ಪ್ರತಿಭಟನೆಯಲ್ಲಿ ಜಯನಗರ ಶಾಸಕಿ ಸೌಮ್ಯ ರೆಡ್ಡಿಯವರ ಮೇಲೆ ಉದ್ದೇಶಪೂರ್ವಕವಾಗಿ ಸುಳ್ಳು ದೂರನ್ನು ಆಧರಿಸಿ ಎಫ್‌ಐಆರ್ ದಾಖಲಿಸಿರುವ ಕ್ರಮವನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿರ್ದೇಶಕ ವಿಶ್ವನಾಥ್ ಮಾಲಿಪಾಟೀಲ್ ಹೇಳಿದರು.

ಶಾಸಕಿ ಸೌಮ್ಯ ರೆಡ್ಡಿ ಕ್ಷೇತ್ರದ ಜನರೊಂದಿಗೆ ಬೆರೆಯುವ ರೀತಿ, ಜನರ ನಡುವೆ ಇರುವ ಒಡನಾಟ ಮತ್ತು ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿದ ರೀತಿಗೆ ಇಡೀ ರಾಜ್ಯವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಇಂತಹ ಶಾಸಕಿಯ ವಿರುದ್ಧ ಅವರ ಜನಪ್ರಿಯತೆಯನ್ನು ಸಹಿಸದೆ, ಅವರ ಧೈರ್ಯವನ್ನು ಕುಗ್ಗಿಸುವ, ಬಡಜನರ ಪರ, ಕೃಷಿ ಕಾರ್ಮಿಕರ ಪರ ಹೋರಾಟವನ್ನು ಹತ್ತಿಕ್ಕುವಂತಹ ದಮನಕಾರಿ ನೀತಿಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದೆ. ಈ ಕೂಡಲೇ ಸೌಮ್ಯಾ ರೆಡ್ಡಿ ಅವರ ಮೇಲೆ ದಾಖಲಿಸಿರುವ ಎಫ್ಐಆರ್ ರದ್ದು ಪಡಿಸಬೇಕೆಂದು ಕಾಂಗ್ರೆಸ್ ಮುಖಂಡರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ವಿಶ್ವನಾಥ್ ಮಾಲಿಪಾಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Related