ಕಾಂಗ್ರೆಸ್ ನಾಯಕರಿಗೆ ಜೀವ ಬೆದರಿಕೆಯ ಪತ್ರ..!

ಕಾಂಗ್ರೆಸ್ ನಾಯಕರಿಗೆ ಜೀವ ಬೆದರಿಕೆಯ ಪತ್ರ..!

ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ.

ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ ಎಂದು ತಿಳಿಸಿದ್ದಾರೆ.

Related