ಪ್ರವಾಹಕ್ಕೆ ಕೊಚ್ಚಿ ಹೋದ ಜನರ ಬದುಕು

ಪ್ರವಾಹಕ್ಕೆ ಕೊಚ್ಚಿ ಹೋದ ಜನರ ಬದುಕು

ಕಲಬುರ್ಗಿ : ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ.

ಮನೆಗಳ ಹಾನಿಯ ಜೊತೆ ಅಂಗಡಿಗಳಲ್ಲಿಯೂ ಅಪಾರ ಹಾನಿ ಸಂಭವಿಸಿದೆ. ಭೀಮಾ ನದಿ ಪ್ರವಾಹಕ್ಕೆ ಜಿಲ್ಲೆ ಜನತೆ ತತ್ತರಿಸಿ ಹೋಗಿದ್ದಾರೆ. ಅಫಜಲಪುರ ತಾಲೂಕಿನಲ್ಲಿ ಪ್ರವಾಹ ಒಂದಷ್ಟು ಇಳಿಮುಖವಾಗಿದೆ.

ಕಲಬುರ್ಗಿ, ಜೇವರ್ಗಿ, ಶಹಾಬಾದ್ ಹಾಗು ಚಿತ್ತಾಪುರ ತಾಲೂಕುಗಳಲ್ಲಿ ಪ್ರವಾಹ ಮುಂದುವರಿದಿದೆ. ಭಾರಿ ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಕಲಬುರ್ಗಿ ತಾಲೂಕಿನ ಸರಡಗಿ ಗ್ರಾಮದಲ್ಲಿ ನೂರಾರು ಮನೆಗಳು ಮುಳುಗಡೆಯಾಗಿವೆ. ಮನೆಗಳ ಜೊತೆ ಅಂಗಡಿಗಳೂ ಜಲಾವೃತಗೊಂಡಿವೆ.

ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿ ಸಂಭವಿಸಿದೆ. ಸುಮಾರು 200 ಮನೆಗಳ ಮುಳುಗಡೆಯಾಗಿವೆ. ಹತ್ತಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿವೆ. ಅಂಗಡಿಯಲ್ಲಿದ್ದ ಸಾಮಾನು ಸರಂಜಾಮುಗಳು ಮುಳುಗಡೆಯಾಗಿವೆ.

ಭಾರಿ ಪ್ರವಾಹದಿಂದಾಗಿ ಏಕಾಏಕಿ ಮನೆ ಬಿಟ್ಟು ಹೋಗುವ ಪರಿಸ್ಥಿತಿ ಬಂದಿದೆ. ಇಷ್ಟು ಪ್ರವಾಹ ಎಂದೂ ಬಂದಿರಲಿಲ್ಲ. ರಾತ್ರಿ ಅಂಗಡಿಗೆ ನೀರು ನುಗ್ಗುತ್ತಿದ್ದಂತೆಯೇ ಎದ್ದು ಓಡಿ ಹೋಗಿದ್ದೇವೆ. ಈಗ ಬಂದು ನೋಡಿದರೆ ಎಲ್ಲ ಸಾಮಾನುಗಳೂ ನೀರಿನಲ್ಲಿ ಮುಳುಗಿ ಹೋಗಿವೆ. ಪ್ರವಾಹದಲ್ಲಿ ನಾವೇ ಕೊಚ್ಚಿ ಹೋಗಿದ್ದರೂ ಪರವಾಗಿರಲಿಲ್ಲ. ಆದ್ರೆ ನಮ್ಮ ಬದುಕೇ ಪ್ರವಾಹಕ್ಕೆ ಕೊಚ್ಚಿ ಹೋಗಿದೆಯೆಂದು ಜನ ಕಣ್ಣೀರು ಹಾಕಿದ್ದಾರೆ.

Related