ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ವಿಸ್ತರಣೆ?

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ವಿಸ್ತರಣೆ?

ಬೆಂಗಳೂರು : ಮತ್ತೆ ರಾಜ್ಯದಲ್ಲಿ ವೈರಸ್ ನಿಯಂತ್ರಣಕ್ಕೆ ಮೇ. 24ರ ಬಳಿಕ ಲಾಕ್‌ಡೌನ್ ವಿಸ್ತರಣೆ ಅನಿವಾರ್ಯ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಗ್ರಾಮೀಣಾ ಭಾಗದಲ್ಲಿ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗಬೇಕಾದ್ರೆ ಲಾಕ್‌ಡೌನ್ ವಿಸ್ತರಣೆ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.

ಇಂದು ಸಂಜೆ ಮುಖ್ಯಮಂತ್ರಿಗಳು ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ವೈಯಕ್ತಿಕವಾಗಿ ಹೇಳುವುದಾದರೆ ರಾಜ್ಯದಲ್ಲಿ ಮೇ. 24ರ ಬಳಿಕ ಲಾಕ್‌ಡೌನ್ ವಿಸ್ತರಿಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದಲ್ಲಿ ವೈರಸ್ ನಿಯಂತ್ರಣ ಸಂಬAಧ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಸಭೆಯ ಬಳಿಕ ಮೇ. 24ರ ನಂತರ ಮತ್ತೆ ಲಾಕ್‌ಡೌನ್ ವಿಸ್ತರಣೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Related