ಅಭಿವೃದ್ಧಿ ಹೆಸರಿನಲ್ಲಿ ಹಣ ಲೂಟಿ – ಬಿಜೆಪಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಅಭಿವೃದ್ಧಿ ಹೆಸರಿನಲ್ಲಿ ಹಣ ಲೂಟಿ – ಬಿಜೆಪಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಸರ್ಕಾರ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. ನಾನು ಯಾವುದೇ ಲೂಟಿ ಹೊಡೆಯುವ ಸಂಸ್ಥೆಗಳನ್ನು ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷಕ್ಕೆ ಬೆಂಗಳೂರಿನಲ್ಲಿ ನೆಲೆಯೇ ಇಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಪಕ್ಷಕ್ಕೆ ನಗರದಲ್ಲಿ ನೆಲೆ ಇದೆಯೋ ಇಲ್ಲವೋ ಎಂಬುದನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತೋರಿಸುತ್ತೇನೆ ಎಂದು ಅವರು ಗುಡುಗಿದರು.

ನಿನ್ನೆ ದಾಸರಹಳ್ಳಿಯ ಅಬ್ಬಿಗೆರೆ ಹಾಗೂ ಹೊಸಕೆರೆಹಳ್ಳಿಯಲ್ಲಿ ನಡೆದ ಜನತಾ ಮಿತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಡವರನ್ನು ಹಿಂಸೆ ಮಾಡುವ ಕೆಲಸ ನಡೆದರೆ ಶ್ರೀಲಂಕಾದ ಪರಿಸ್ಥಿತಿ ಇಲ್ಲಿಯೂ ನಡೆಯುತ್ತದೆ. ಇನ್ನೊಂದು ಶ್ರೀಲಂಕಾ ಸೃಷ್ಟಿ ಮಾಡುವ ಪಕ್ಷಗಳು ನಿಮಗೆ ಬೇಕಾ ಎಂದು ಮಾಜಿ ಮುಖ್ಯಮಂತ್ರಿಗಳು ಜನರನ್ನು ಪ್ರಶ್ನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಂಬಬೇಡಿ. ನರೇಂದ್ರ ಮೋದಿ ಮಾತಿಗೆ ನೀವು ಮರುಳಾಗಬೇಡಿ. ಮೋದಿ ಹಾಗೂ ಬಿಜೆಪಿ ಪಕ್ಷ ಇರುವುದೇ ಶ್ರೀಮಂತರಿಗಾಗಿ, ಚುನಾವಣೆ ಸಂದರ್ಭದಲ್ಲಿ ಹಣ ಕೊಟ್ಟು ಮತ ಪಡೆಯಲು ಬರುತ್ತಾರೆ. ನಿಮ್ಮ ದುಡ್ಡನ್ನು ಲೂಟಿ ಮಾಡಿ ಮಜಾ ಮಾಡುತ್ತಿದ್ದಾರೆ. ಅವರು ಶ್ರೀಮಂತರ ಪರವಾಗಿದ್ದಾರೆ. ಬಡವರ ಪರ ಇಲ್ಲ ಎಂದು ಟೀಕಿಸಿದರು.
ಪಿಎಸ್ಐ ಹುದ್ದೆ ಪಡೆಯಲು ಲಕ್ಷಾಂತರ ರೂ. ಲಂಚ ನೀಡಬೇಕಾದ ಪರಿಸ್ಥಿತಿ ಇದೆ. ಜನರ ಹಣ ರಾಜ್ಯದಲ್ಲಿ ಲೂಟಿಯಾಗುತ್ತಿದೆ ಎಂದು ಅವರು ಹೇಳಿದರು.

Related