ಮತ್ತೊಮೆ ಡಬ್ಬಲ್ ಇಂಜಿನ್ ಸರ್ಕಾರ ಬರಲಿದೆ: ಎಂ. ಸತೀಶ್ ರೆಡ್ಡಿ

ಮತ್ತೊಮೆ ಡಬ್ಬಲ್ ಇಂಜಿನ್ ಸರ್ಕಾರ ಬರಲಿದೆ: ಎಂ. ಸತೀಶ್ ರೆಡ್ಡಿ

ಬೊಮ್ಮನಹಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಯೋಜನೆಗಳು, ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸತತ 15 ವರ್ಷಗಳಿಂದ ಕೈಗೊಂಡಿರುವ ಅಭಿವೃದ್ದಿ ಕರ‍್ಯಗಳಿಗೆ ಆಕರ್ಷಿತರಾಗಿ ಮಂಗಮ್ಮನಪಾಳ್ಯ ವಾರ್ಡ್ಗೆ ಸೇರಿರುವ ವಿವಿಧ ಪಕ್ಷಗಳ ಮುಖಂಡರು, ಕರ‍್ಯಕರ್ತರು ಗೋವಿಂದರವರ ತಂಡದವರು ಶಾಸಕ ಎಂ. ಸತೀಶ್ ರೆಡ್ಡಿಯವರ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ವೇಳೆ ಮಾತನಾಡಿದ ಶಾಸಕರು, ಮತ್ತೊಮ್ಮೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬರಲಿದೆ. ಡಬ್ಬಲ್ ಇಂಜಿನ್ ಸರ್ಕಾರದ ಯೋಜನೆಗಳು ರಾಜ್ಯದೆಲ್ಲೆಡೆ ಜನತೆಯ ಮೆಚ್ಚುಗೆಗೆ ಪಾತ್ರವಾಗಿದ್ದು, ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ 150ಕ್ಕೂ ಅಧಿಕ ಬಹುಮತ ಪಡೆದು ಮತ್ತೊಮ್ಮೆ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿ ಮುಂದುವರೆಯಲಿದೆ ಎಂದು ನುಡಿದರು.

Related