“ಕೈ” ಹಿಡಿದ ಮಧು ಬಂಗಾರಪ್ಪ

“ಕೈ” ಹಿಡಿದ ಮಧು ಬಂಗಾರಪ್ಪ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಆರ್ ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್‌ಗೆ ಪದಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ, ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಇನ್ನಿತರರಿದ್ದರು.

Related