ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ: ಸಿಎಂ

ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ: ಸಿಎಂ

ಬೆಂಗಳೂರು: ಇಂದು ಡಿಸೆಂಬರ್ 1ನೇ ತಾರೀಕು. ವಿಶ್ವದಾದ್ಯಂತ ಇಂದು ವಿಶ್ವ ಏಡ್ಸ್ ದಿನಾಚರಣೆಯನ್ನು ಆಚರಿಸಲಾಗುತ್ತದೆ ಆಚರಿಸಲಾಗುತ್ತದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ.

ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು. 2015-2020ರವರೆಗೆ ಏಡ್ಸ್ ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ ಆರೋಗ್ಯ ಇಲಾಖೆಯ ಹೊಣೆಯಾಗಿರದೇ, ಇಡೀ ಸಮಾಜದ ಹೊಣೆಯಾಗಿದೆ. ಎಂದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಏಡ್ಸ್ ತಗಲಿರುವ ವ್ಯಕ್ತಿಯೊಂದಿಗೆ ಮಾತನಾಡಿದ ಸಿಎಂ ಕಾಯಿಲೆ ಬಂದ ನಂತರ 26 ವರ್ಷಗಳ ಕಾಲ ಬದುಕಿದ್ದಾರೆ ಹಾಗೂ ಧೈರ್ಯವಾಗಿದ್ದಾರೆ ಎಂದು ಸಭಿಕರಿಗೆ ತಿಳಿಸಿದರು. ಆಂಜಿಯೋಪ್ಲಾಸ್ಟಿಯಾಗಿದ್ದರೂ ಧೈರ್ಯವಾಗಿ ಅದನ್ನು ಎದುರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related