ತುಳಿಯುವುದೇ ಸಿದ್ದರಾಮಯ್ಯ ಕೆಲಸ

ತುಳಿಯುವುದೇ ಸಿದ್ದರಾಮಯ್ಯ ಕೆಲಸ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ಎಳಸು ಮುಂಡೆದೇ ಸರಿಯಾಗಿ ಮಾತನಾಡು ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಪತ್ರ ಬರೆದು ರಾಹುಲ್ ಗಾಂಧಿಗೆ ಬುದ್ದಿ ಹೇಳಿದ್ದಾರೆ ಇಷ್ಟಾದರು ತಮ್ಮ ತಪ್ಪುಗಳನ್ನು ತಿದ್ದಿಕೊಂಡಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸಮಗ್ರತೆಯ ವಿಚಾರ ಬಂದಾಗ ಸರಿಯಾಗಿ ಮಾತನಾಡಬೇಕು. ನೀವು ನಿಮ್ಮ ಪಕ್ಷದ ಪ್ರಧಾನಿಗಳಿಗೆ ಸರಿಯಾದ ಗೌರವ ಕೊಟ್ಟಿಲ್ಲ. ಮನಮೋಹನ್ ಸಿಂಗ್, ನರಸಿಂಹರಾವ್ ಅವರನ್ನು ನೀವು ಹೇಗೆ ನಡೆಸಿಕೊಂಡಿರಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಲೇವಡಿ ಮಾಡಿದರು.

ಪ್ರಧಾನಿ ಮೋದಿ ವಿರುದ್ಧ ಆಪಾದನೆ ಮಾಡುತ್ತಿರುವ ಪ್ರತಿಪಕ್ಷಗಳ ನಾಯಕರು ದಾಖಲೆಗಳಿದ್ದರೆ ಬಿಡುಗಡೆ ಮಾಡಿ. ಕೇವಲ ಹಿಟ್ ಅಂಡ್ ರನ್ ನಂತೆ ಆರೋಪ ಮಾಡಬೇಡಿ. ಕಾಂಗ್ರೆಸ್ ನಾಯಕರೇ ಅಪ್ರಬುದ್ದರಂತೆ ಮಾತನಾಡಬೇಡಿ ಎಂದರು.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತು ಹಾಕಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದೇ ನಾನು. ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯರನ್ನು ಈ ರಾಜ್ಯದ ಮುಖ್ಯಮಂತ್ರಿ ಮಾಡಿದ್ದಕ್ಕೆ ಪಶ್ಚಾತ್ತಾಪ ಆಗಿಲ್ಲ, ಸಂತೋಷವಾಗಿದೆ ಎಂದರು. ಆದರೆ ಸಿದ್ದರಾಮಯ್ಯ ಎಲ್ಲರನ್ನೂ ತುಳಿಯುವ ಕೆಲಸ ಮಾಡಿದರು. ಎಲ್ಲರನ್ನೂ ತುಳಿಯುವುದೇ ಸಿದ್ದರಾಮಯ್ಯ ಕೆಲಸವಾಗಿದೆ ಎಂದು ಕಿಡಿಕಾರಿದರು.

 

Related