ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಪರ ಮಲ್ಲಿಕಾರ್ಜುನ ಖರ್ಗೆ ಮತ ಬೇಟೆ

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಪರ ಮಲ್ಲಿಕಾರ್ಜುನ ಖರ್ಗೆ ಮತ ಬೇಟೆ

ಕಲಬುರಗಿ: ಅಫ್ಜಲ್ ಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ನಡೆದ ಪ್ರಜಾಧ್ವನಿ ಜನಯಾತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಉದ್ಘಾಟಿಸಿದರು.

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಖಂಡಿತವಾಗಿ ಸೋತೆ ಸೋಲ್ತಾರೆ ಎಂದು ಹೇಳಿದರು. ದೇಶದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಚಾರ್ ಸೌ ಸೀಟು ಗೆಲ್ತಾರೆ ಅಂತ ಹೇಳ್ತಾರಲ್ಲ… ಮೋದಿಯವರು ದೋ ಸೌ ಸೀಟು ಕೂಡ ಗೆಲ್ಲುವುದಿಲ್ಲ ಎಂದು ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮಾತನಾಡುವಾಗ ತಿಳುವಳಿಕೆಯಿಂದ ಮಾತನಾಡಿದರೆ ಅವರ ಹುದ್ದೆಗು, ಅವರಿಗೂ ಗೌರವ ಸಿಗುತ್ತದೆ ಎಂದರು.

ಮೋದಿ ಅವರ ಸುಳ್ಳಿಗೆ ಮರುಳಾಗಿ ಬಿಜೆಪಿ ಪಕ್ಷಕ್ಕೆ ಮತ ನೀಡದೆ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಮಾಜಿ ಸಚಿವ ಮಾಲೀಕಯ್ಯ ಗುತ್ತಾದಾರ್, ಶಾಸಕರಾದ M Y ಪಾಟೀಲ್, ಖಾನಿಜ್ ಫಾತಿಮಾ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Related