ಮಲ್ಲಿಕಾರ್ಜುನ ಖರ್ಗೆಗೆ ಒಲಿದು ಬಂತು ಮೈತ್ರಿಕೂಟದ ಅಧ್ಯಕ್ಷ ಸ್ಥಾನ

ಮಲ್ಲಿಕಾರ್ಜುನ ಖರ್ಗೆಗೆ ಒಲಿದು ಬಂತು ಮೈತ್ರಿಕೂಟದ ಅಧ್ಯಕ್ಷ ಸ್ಥಾನ

ದೆಹಲಿ: ಕರ್ನಾಟಕ ರಾಜ್ಯದ ಕಾಂಗ್ರೆಸಿನ ಧೀಮಂತ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೈತ್ರಿಕೂಟದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಮೈತ್ರಿಕೂಟ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದಿಂದ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದರಿಂದ ನಮ್ಮ ಕರ್ನಾಟಕ ರಾಜ್ಯದ ಹೆಮ್ಮೆ ಮತ್ತಷ್ಟು ಹೆಚ್ಚಾಗಿದೆ.

ಹೌದು, ಇಂದು (ಜ.13) ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಲು ಕೇಳಲಾಗಿತ್ತು ಆದರೆ ಪ್ರಸ್ತಾವನ್​ ನಿತೀಶ್​ ನಿರಾಕರಿಸಿದ್ದಾರೆ. ವಾಸ್ತವವಾಗಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26 ಪಕ್ಷಗಳ ಮೈತ್ರಿಕೂಟದ ಮಹತ್ವದ ಸಭೆ ಶನಿವಾರ ನಡೆಯಿತು.

ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಕುಲ್ ವಾಸ್ನಿಕ್ ಕೂಡ ಉಪಸ್ಥಿತರಿದ್ದರು. ಅವರು ಕಾಂಗ್ರೆಸ್‌ನ ರಾಷ್ಟ್ರೀಯ ಮೈತ್ರಿ ಸಮಿತಿಯ ಸಂಚಾಲಕರಾಗಿದ್ದಾರೆ. ಇದೀಗ ನಿತೀಶ್​ ಕುಮಾರ್​ಗೆ ಇಂಡಿಯಾ ಮೈತ್ರಿಕೂಡದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿದೆ.

ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.

 

Related